
ವಿಜಯಪುರ, 07 ನವೆಂಬರ್ (ಹಿ.ಸ.) :
ಆ್ಯಂಕರ್ : ಕಬ್ಬಿಗೆ ಪ್ರತಿ ಟನ್‌ಗೆ 3,500 ರೂಪಾಯಿ ಬೆಲೆ ನೀಡಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ.
ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಬೆಳೆಗೆ ವೈಜ್ಞಾನಿಕ ಬೆಲೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಿದರು.
ಪೊಲೀಸರು ಹೆದ್ದಾರಿ ತಡೆ ಮಾಡುತ್ತಿರುವ ರೈತರನ್ನು ತೆರವುಗೊಳಿಸಲು ಹರಸಾಹಸ ಪಡುತ್ತಿದ್ದಾರೆ. ರೈತರ ಪ್ರತಿಭಟನೆಯಲ್ಲಿ ಗುಳೇದಗುಡ್ಡ ಒಪ್ಪತ್ತೇಶ್ವರ ಸ್ವಾಮೀಜಿ ಕೂಡ ಭಾಗಿಯಾಗಿ ಬೆಂಬಲ ಸೂಚಿಸಿದ್ದಾರೆ.
ಬೆಳಗಾವಿ - ಗದ್ದನಕೇರಿ ಕ್ರಾಸ್ ಬಳಿ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಕಬ್ಬು ಬೆಳೆಗಾರ ರೈತರು ಹಸಿರು ಶಾಲನ್ನು ಗಾಳಿಯಲ್ಲಿ ತಿರುಗಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande