ಶುಕ್ರವಾರದ ರಾಶಿ ಫಲ
ಹುಬ್ಬಳ್ಳಿ, 07 ನವೆಂಬರ್ (ಹಿ.ಸ.) : ಆ್ಯಂಕರ್ : ಶುಕ್ರವಾರದ ರಾಶಿ ಫಲ *ಮೇಷ ರಾಶಿ.* ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗಿನ ಚರ್ಚೆಗಳು ಅನುಕೂಲಕವಾಗಿರುತ್ತವೆ. ವೃತ್ತಿಪರ ವ್ಯವಹಾರದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಅನುಕೂಲಕರವಾಗಿರುತ್ತದೆ. ಆಲೋಚನೆಗಳು ಅನುಕೂಲಕರವಾಗಿರುತ್ತದೆ. ಕೈಗೆತ್ತಿಕೊಂಡ ಕ
ಶುಕ್ರವಾರದ ರಾಶಿ ಫಲ


ಹುಬ್ಬಳ್ಳಿ, 07 ನವೆಂಬರ್ (ಹಿ.ಸ.) :

ಆ್ಯಂಕರ್ : ಶುಕ್ರವಾರದ ರಾಶಿ ಫಲ

*ಮೇಷ ರಾಶಿ.*

ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗಿನ ಚರ್ಚೆಗಳು ಅನುಕೂಲಕವಾಗಿರುತ್ತವೆ. ವೃತ್ತಿಪರ ವ್ಯವಹಾರದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಅನುಕೂಲಕರವಾಗಿರುತ್ತದೆ. ಆಲೋಚನೆಗಳು ಅನುಕೂಲಕರವಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಭೂಮಿಗೆ ಸಂಬಂಧಿಸಿದ ಖರೀದಿ ಮತ್ತು ಮಾರಾಟ ಲಾಭದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಸಮಸ್ಯೆಗಳನ್ನು ನಿವಾರಿಸಲಾಗುತ್ತದೆ.

*ವೃಷಭ ರಾಶಿ.*

ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ಪ್ರಯಾಣದಲ್ಲಿ ಹಠಾತ್ ಬದಲಾವಣೆಗಳು ಉಂಟಾಗುತ್ತವೆ. ಆರೋಗ್ಯದ ವಿಷಯದಲ್ಲಿ ಸ್ವಲ್ಪ ಗಮನ ಅಗತ್ಯ. ಆಕಸ್ಮಿಕ ಧನ ವ್ಯಯದ ಸೂಚನೆಗಳಿವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ ಮತ್ತು ಉದ್ಯೋಗಗಳು ಉತ್ತಮವಾಗಿ ನಡೆಯುವುದಿಲ್ಲ. ವ್ಯಾಪಾರ ದಲ್ಲಿ ಪ್ರಮುಖ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ.

*ಮಿಥುನ ರಾಶಿ.*

ಹಣಕಾಸಿನ ತೊಂದರೆಗಳು ಬಾಧಿಸುತ್ತವೆ. ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ. ಕುಟುಂಬದ ಜವಾಬ್ದಾರಿಗಳು ಹೆಚ್ಚು ಕಿರಿಕಿರಿಯನ್ನುಂಟುಮಾಡುತ್ತವೆ. ಸಂಬಂಧಿಕರೊಂದಿಗೆ ಸಣ್ಣ ವಿವಾದಗಳು ಉಂಟಾಗುತ್ತವೆ. ನಿರುದ್ಯೋಗಿಗಳಿಗೆ ನಿರುತ್ಸಾಹ ವಾತಾವರಣವಿರುತ್ತದೆ. ಉದ್ಯೋಗದಲ್ಲಿ ಕೆಲವು ಗೊಂದಲಮಯ ಸನ್ನಿವೇಶಗಳಿರುತ್ತವೆ. ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕಟಕ ರಾಶಿ.*

ಬಂಧು ಮಿತ್ರರ ಭೇಟಿಯು ಸಂತಸ ತರುತ್ತದೆ. ಪ್ರಮುಖ ಕೆಲಸಗಳಲ್ಲಿನ ಅಡೆತಡೆಗಳನ್ನು ನಿವಾರಿಸಿ ಮುನ್ನಡೆಯಲಾಗುತ್ತದೆ. ಹಠಾತ್ ಧನ ಲಾಭ ಉಂಟಾಗುತ್ತದೆ. ಸಮಾಜದ ಪ್ರಮುಖ ವ್ಯಕ್ತಿಗಳ ಸಂಪರ್ಕವು ಲಭದಾಯಕವಾಗಿರುತ್ತದೆ. ಕುಟುಂಬ ಸದಸ್ಯರ ಬೆಂಬಲ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಯೋಚಿಸಿ ಮುಂದುವರಿಯುವುದು ಉತ್ತಮ.

*ಸಿಂಹ ರಾಶಿ.*

ನಿರ್ಣಾಯಕ ಸಮಯದಲ್ಲಿ ಬಂಧು ಮಿತ್ರರಿಂದ ಬೆಂಬಲ ದೊರೆಯುತ್ತದೆ.ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿನ ಪರಿಸ್ಥಿತಿಗಳು ಅನುಕೂಲಕರವಾಗಿ ಬದಲಾಗುತ್ತವೆ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿ ಮತ್ತು ವ್ಯವಹಾರಗಳನ್ನು ವಿಸ್ತರಿಸುವ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗಗಳಲ್ಲಿ ಅನುಕೂಲತೆ ಹೆಚ್ಚಾಗುತ್ತದ.

*ಕನ್ಯಾ ರಾಶಿ.*

ದೀರ್ಘಕಾಲದ ಸಾಲಗಳು ದೂರವಾಗುತ್ತವೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಕುಟುಂಬದಲ್ಲಿ ಅಗತ್ಯಕ್ಕೆ ತಕ್ಕಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಕೈಗೊಂಡ ಕಾರ್ಯಗಳು ಉತ್ತಮವಾಗಿ ಸಾಗುತ್ತವೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ದೊರೆಯುತ್ತದೆ.

*ತುಲಾ ರಾಶಿ.*

ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ಮಾನಸಿಕ ಸಮಸ್ಯೆಗಳು ಕಿರಿಕಿರಿಯುಂಟುಮಾಡುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಪ್ರಮುಖ ವ್ಯವಹಾರಗಳನ್ನು ಮುಂದೂಡುವುದು ಉತ್ತಮ. ವ್ಯಾಪಾರ ಮತ್ತು ಉದ್ಯೋಗಗಳು ಅನಿರೀಕ್ಷಿತ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

*ವೃಶ್ಚಿಕ ರಾಶಿ.*

ಕೈಗೆತ್ತಿಕೊಂಡ ಕೆಲಸಗಳಲ್ಲಿ ಶ್ರಮ ಹೆಚ್ಚಾದರ ಪೂರ್ಣಗೊಳ್ಳುವುದಿಲ್ಲ. ಆತ್ಮಸ್ಥೈರ್ಯದಿಂದ ವಿವಾದಳಿಂದ ಹೊರಬರುತ್ತೀರಿ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ವ್ಯಾಪಾರ-ವ್ಯವಹಾರದಲ್ಲಿ ತೊಂದರೆಗಳನ್ನು ಎದುರಿಸುತ್ತಿದ್ದರೂ, ಅವುಗಳನ್ನು ನಿವಾರಿಸಿ ಲಾಭವನ್ನು ಪಡೆಯುತ್ತೀರಿ ಮತ್ತು ಉದ್ಯೋಗದಲ್ಲಿ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಆದಾಯ ಚೆನ್ನಾಗಿರಲಿದೆ.

*ಧನುಸ್ಸು ರಾಶಿ.*

ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ನಿಮ್ಮ ಆಲೋಚನೆಗಳು ಕುಟುಂಬದ ಸದಸ್ಯರಿಗೆ ಇಷ್ಟವಾಗುವುದಿಲ್ಲ. ಕೆಲಸಗಳನ್ನು ಮಧ್ಯದಲ್ಲಿ ನಿಲ್ಲುತ್ತವೆ. ಹಣಕಾಸಿನ ತೊಂದರೆಗಳು ಹೆಚ್ಚು ನೋವುಂಟು ಮಾಡುತ್ತವೆ. ವೃತ್ತಿ ಮತ್ತು ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ ಮತ್ತು ಉದ್ಯೋಗದ ವಾತಾವರಣವು ಸಮಸ್ಯಾತ್ಮಕವಾಗಿರುತ್ತದೆ.

*ಮಕರ ರಾಶಿ.*

ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು ದೊರೆಯುತ್ತದೆ. ಸೋದರ ಸಂಬಂಧಿಗಳೊಂದಿಗೆ ಜಮೀನಿಗೆ ಸಂಬಂಧಿಸಿದ ವಿವಾದಗಳು ಅಂತ್ಯಗೊಳ್ಳುತ್ತವೆ. ಶುಭ ಸುದ್ದಿ ದೊರೆಯುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ. ಉದ್ಯೋಗದಲ್ಲಿನ ವಿವಾದಗಳನ್ನು ಪರಿಹರಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ನಿಮ್ಮ ಪ್ರಯತ್ನಗಳು ಫಲಿಸುತ್ತವೆ.

*ಕುಂಭ ರಾಶಿ.*

ಕೈಗೆತ್ತಿಕೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತದೆ. ಸಾಕಷ್ಟು ಆದಾಯವನ್ನು ದೊರೆಯುವುದಿಲ್ಲ. ವ್ಯರ್ಥ ಖರ್ಚುಗಳ ಬಗ್ಗೆ ಜಾಗರೂಕರಾಗಿರಿ. ವ್ಯಾಪಾರ ಪಾಲುದಾರರೊಂದಿಗೆ ಸಣ್ಣ ವಿವಾದಗಳಿರುತ್ತವೆ . ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದಗಳ ಸೂಚನೆಗಳಿವೆ.

*ಮೀನ ರಾಶಿ.*

ಅನಾರೋಗ್ಯದಿಂದ ಮುಕ್ತಿ ದೊರೆಯುತ್ತದೆ. ಕೆಲವು ವ್ಯವಹಾರಗಳಲ್ಲಿ ಇತರರ ಸಹಾಯ ಮತ್ತು ಸಹಕಾರ ದೊರೆಯುತ್ತದೆ. ಹಣದ ಆದಾಯ ಚೆನ್ನಾಗಿರಲಿದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ಸಕಾರಾತ್ಮಕ ಫಲಿತಾಂಶಗಳನ್ನು ನೀಡುತ್ತವೆ. ಮಕ್ಕಳು ಶೈಕ್ಷಣಿಕ ವಿಷಯಗಳಲ್ಲಿ ತೃಪ್ತರಾಗುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande