ಎಂಬಿಬಿಎಸ್, ಬಿಇ ವಿದ್ಯಾರ್ಥಿಗಳ ಪ್ರವೇಶಾತಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
ಹೊಸಪೇಟೆ, 08 ನವೆಂಬರ್ (ಹಿ.ಸ.) : ಆ್ಯಂಕರ್ : 2024-25 ನೇ ಸಾಲಿನ ಎಸ್‍ಎಫ್‍ಸಿ ಯೋಜನೆಯಡಿ ಹಗರಿಬೊಮ್ಮನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಇತರೆ ಬಡ ಜನಾಂಗದ ಅರ್ಹ ಫಲಾನುಭವಿಗಳಿಗೆ ವಿವಿಧ ಕಾರ್ಯಕ್ರಮ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಗರಿಬ
ಎಂಬಿಬಿಎಸ್, ಬಿಇ ವಿದ್ಯಾರ್ಥಿಗಳ ಪ್ರವೇಶಾತಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ


ಹೊಸಪೇಟೆ, 08 ನವೆಂಬರ್ (ಹಿ.ಸ.) :

ಆ್ಯಂಕರ್ : 2024-25 ನೇ ಸಾಲಿನ ಎಸ್‍ಎಫ್‍ಸಿ ಯೋಜನೆಯಡಿ ಹಗರಿಬೊಮ್ಮನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಇತರೆ ಬಡ ಜನಾಂಗದ ಅರ್ಹ ಫಲಾನುಭವಿಗಳಿಗೆ ವಿವಿಧ ಕಾರ್ಯಕ್ರಮ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಗರಿಬೊಮ್ಮನಹಳ್ಳಿ ಪುರಸಭೆ ಮುಖ್ಯಾಧಿಕಾರಿ ಎಂ.ಕೆ.ಮುಗಳಿ ಅವರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಯ ಎಂಬಿಬಿಎಸ್ ಮತ್ತು ಬಿಇ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ಸರ್ಕಾರಿ ಕೋಟದಡಿ ಸೀಟು ಪಡೆದಿರುವ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಶುಲ್ಕಕ್ಕೆ ಸಹಾಯಧನ ಪಾವತಿಸುವುದು.

ಇತರೆ, ಹಿಂದುಳಿದ ವರ್ಗದ ಎಂಬಿಬಿಎಸ್ ಮತ್ತು ಬಿಇ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಡೆಸ್ಕ್ ಟಾಪ್ ಕಂಪ್ಯೂಟರ್ ಮತ್ತು ಲ್ಯಾಪ್‍ಟ್ಯಾಪ್ ಖರೀದಿಗಾಗಿ ಸಹಾಯಧನ ನೀಡುವುದು. ನಾಗರಿಕ ಸೇವಾ ವೃತ್ತಿಗೆ ಸಂಬಂಧಿಸಿದ ಪೂರ್ವಭಾವಿ, ಮುಖ್ಯ ಪರೀಕ್ಷೆಗೆ ಅಧಿಕೃತ ಹೊಂದಿರುವ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶ ಮತ್ತು ಶುಲ್ಕಗಳನ್ನು ನೀಡುವುದು.

ಅರ್ಹ ಅಭ್ಯರ್ಥಿಗಳು ಲಗತ್ತಿಸಬೇಕಾದ ದಾಖಲಾತಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ಇತ್ತೀಚಿನ ನಾಲ್ಕು ಪಾಸ್‍ಪೆÇೀರ್ಟ್ ಅಳತೆಯ ಭಾವಚಿತ್ರಗಳು, ಶಿಕ್ಷಣಕ್ಕೆ ಸಂಬಂಧಿಸಿದಂತೆ ಪ್ರಸಕ್ತ 2025-26 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ವ್ಯಾಸಂಗ ಪ್ರಮಾಣ ಪತ್ರ, ಪ್ರವೇಶಾತಿ ಪಡೆದ ರಶೀದಿ ಪ್ರತಿ, ಅಂಕಪಟ್ಟಿಗಳ ಪ್ರತಿಗಳನ್ನು ಮತ್ತು ಹಗರಿಬೊಮ್ಮನಹಳ್ಳಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಇವರಿಂದ 2025-26ನೇ ಸಾಲಿನಲ್ಲಿ ಲ್ಯಾಪ್‍ಟ್ಯಾಪ್ ಪಡೆಯದಿರುವ ಬಗ್ಗೆ ದೃಢೀಕರಣ ಪತ್ರ, ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವ ಫಲಾನುಭವಿಗಳು ನಿಗಧಿಪಡಿಸಿದ ವಿದ್ಯಾರ್ಹತೆಯ ಅಂಕಗಳೊಂದಿಗೆ ಸಂಬಧಿಸಿದ ನಿಗಧಿತ ಅರ್ಜಿ ನಮೂನೆಯನ್ನು ಪುರಸಭೆ ಕಚೇರಿಯಲ್ಲಿ ಪಡೆದು ಸಲ್ಲಿಸತಕ್ಕದ್ದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande