
ಗದಗ, 08 ನವೆಂಬರ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿಂದು ಗದಗ ನಗರದ ಹಾತಲಗೇರಿ ನಾಕಾದಲ್ಲಿ ದಾಸ ಶ್ರೇಷ್ಠ ಸಂತ ಕನಕದಾಸ ಜಯಂತಿ ಆಚರಿಸಲಾಯಿತು.
ವಿಧಾನ ಪರಿಷತ ಸದಸ್ಯರಾದ ಎಸ್.ವಿ.ಸಂಕನೂರ ಅವರು ದಾಸ ಶ್ರೇಷ್ಠಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕನಕದಾಸರು ಕನ್ನಡ ಸಾಹಿತ್ಯವನ್ನು ಉತ್ತುಂಗಕ್ಕೆ ಕೊಂಡೊಯ್ದಂತಹ ಮಹಾನ ದಾಸರಾಗಿದ್ದರು. ದಾಸ ಸಾಹಿತ್ಯದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮೂಲಕ ಸಮಾಜ ಸುಧಾರಣೆಗೆ ಮುಂದಾಗಿ
ತಮ್ಮ ದಾಸ ಸಾಹಿತ್ಯದ ಮೂಲಕ ಸಮಾಜದಲ್ಲಿ ಐಕ್ಯತೆ ಮೂಡಿಸುವ ಕಾರ್ಯ ಮಾಡಿದ ಮಹಾನ ಸಂತರಾಗಿದ್ದರು ಎಂದು ನುಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರಾದ ವಾಸಣ್ಣ ಕುರಡಗಿ, ಜೊಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ ಬಿ ಅಸೂಟಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರೋಹನ ಜಗದೀಶ, ಉಪವಿಭಾಗಾಧಿಕಾರಿ ಗಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ಡಾ. ಬಸವರಾಜ ಬಳ್ಳಾರಿ, ಸಮೂದಾಯದ ಜಿಲ್ಲಾಧ್ಯಕ್ಷ ಪಕ್ಕೀರಪ್ಪ ಹೆಬಸೂರ ಸೇರಿದಂತೆ ಸಮಾಜದ ಮುಖಂಡರು, ಗಣ್ಯರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP