ರೈತರ ಅನುಕೂಲಕ್ಕಾಗಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ : ಎನ್ಎಸ್ ಬೋಸರಾಜು
ಮಾನ್ವಿ, 0 8 ನವೆಂಬರ್ (ಹಿ.ಸ.) : ಆ್ಯಂಕರ್ : ಮಾನ್ವಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಸಂದರ್ಭದಲ್ಲಿ ಜನತೆಗೆ ನೀಡಿದ ಆಶ್ವಾಸನೆ, ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅನೇಕ ಜನಪರ ಗ್ಯಾರಂಟಿ ಯೋಜನೆಗಳೊಂದ
ರೈತರ ಅನುಕೂಲಕ್ಕಾಗಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ  : ಎನ್ಎಸ್ ಬೋಸರಾಜು


ರೈತರ ಅನುಕೂಲಕ್ಕಾಗಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ  : ಎನ್ಎಸ್ ಬೋಸರಾಜು


ಮಾನ್ವಿ, 0 8 ನವೆಂಬರ್ (ಹಿ.ಸ.) :

ಆ್ಯಂಕರ್ : ಮಾನ್ವಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಸಂದರ್ಭದಲ್ಲಿ ಜನತೆಗೆ ನೀಡಿದ ಆಶ್ವಾಸನೆ, ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅನೇಕ ಜನಪರ ಗ್ಯಾರಂಟಿ ಯೋಜನೆಗಳೊಂದಿಗೆ ಕ್ಷೇತ್ರದ ಅಭಿವೃದ್ದಿಗೆ ಸರ್ಕಾರ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಹೆಚ್ಚಿನ ಅನುದಾನವನ್ನು ನೀಡಲಾಗುತ್ತಿದೆ. ಭೂಮಿ ಪೂಜೆ ನೆರವೇರಿಸಿದ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಮುಗಿಸಬೇಕು ಎಂದು ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಹಂಪಯ್ಯ ನಾಯಕ ಅವರು ಜಂಟಿಯಾಗಿ ಅಧಿಕಾರಿಗಳಿಗೆ ತಿಳಿಸಿದರು.

ಮಾನ್ವಿ ವಿಧಾನಸಭಾ ಕ್ಷೇತ್ರದ ಬಾಗಲವಾಡ ಗ್ರಾಮದಲ್ಲಿ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 4 ಕೋಟಿ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ, ಕೆಕೆಆರ್ ಡಿಬಿ ಮ್ಯಾಕ್ರೋ ಯೋಜನೆ ಅಡಿ 50 ಲಕ್ಷ ರೂ ವೆಚ್ಚದ ಬಾಗಲವಾಡ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ, ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ವಿಶೇಷ ಅನುದಾನ ಯೋಜನೆ ಅಡಿಯಲ್ಲಿ ಬಾಗಲವಾಡ ಗ್ರಾಮದ ವಾರ್ಡ್ ನಂ 7 ರಲ್ಲಿ 10 ಲಕ್ಷ ರೂನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ, ಮುಖ್ಯಮಂತ್ರಿಗಳ ವಿಶೇಷ ಕಾರ್ಯಕ್ರಮ ಯೋಜನೆ ಅಡಿ 1 ಕೋಟಿ ವೆಚ್ಚದಲ್ಲಿ ಬಾಗಲವಾಡ ಗ್ರಾಮದಿಂದ ನಡುಗಡ್ಡೆ ಕ್ಯಾಂಪ್ ವರೆಗೆ ಸಂಪರ್ಕಿಸುವ ರಸ್ತೆ ಸುಧಾರಣಾ ಕಾಮಗಾರಿ, ರಾಜ್ಯ ಸರ್ಕಾರದ ಅಪೆಂಡಿಕ್ಸ್ ಯೋಜನೆ ಅಡಿಯಲ್ಲಿ ರಾಮದುರ್ಗ ಜೀನೂರು ಕ್ರಾಸ್ ನಿಂದ ಕರೆಗುಡ್ಡ ಕ್ರಾಸ್ ಗೆ ಸಂಪರ್ಕಿಸುವ 2 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಸಚಿವರು ಹಾಗೂ ಶಾಸಕರಾದ ಹಂಪಯ್ಯ ನಾಯಕ‌ ಮಾತನಾಡಿದರು..

ಗ್ರಾಮೀಣ ಭಾಗದಲ್ಲಿ ರೈತರ ಹೊಲ-ಗದ್ದೆಗಳಿಗೆ ಸಂಪರ್ಕಿಸುವ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವ ಮೂಲಕ ರೈತರು ಬೆಳೆದ ಬೆಳೆಗಳ ಸಾಗಾಣಿಕೆಗೆ ಹಾಗೂ ರೈತರ ಸುಗಮ ಓಡಾಟಕ್ಕೆ ಅನುಕೂಲ ಕಲ್ಪಿಸಲು ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದೇವೆ. ಅವಶ್ಯವಿರುವಲ್ಲಿ ರೈತರ ಬೇಡಿಕೆಗೆಯಂತೆ ಅಂತಹ ಹಂತವಾಗಿ ರಸ್ತೆಗಳನ್ನ ದುರಸ್ತಿ ಮಾಡಲು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಮಾನ್ವಿ ವಿಧಾನ ಸಭಾ ಕ್ಷೇತ್ರದಾದ್ಯಂತ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ವಿದ್ಯುತ್, ರಸ್ತೆ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಮ್ಮ ಆದ್ಯತೆಯಂತೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹೆಚ್ಚಿನ ಅನುದಾನವನ್ನು ಮೀಸಲಿಡುವ ಮೂಲಕ ಈ ಭಾಗದ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ವಿಶೇಷ ಕಾಳಜಿ ವಹಿಸುತ್ತಿದೆ.

ಬಾಗಲವಾಡ ಗ್ರಾಮದ ಜನರಿಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ ಈ ಸಮುದಾಯ ಭವನ ಸೇರಿ ಭೂಮಿ ಪೂಜೆ ನೆರವೇರಿಸಿದ ಎಲ್ಲಾ ಕಾಮಗಾರಿಗಳನ್ನು ಅಧಿಕಾರಿಗಳು ತೋರಿತಗತಿಯಲ್ಲಿ ಗುಣಮಟ್ಟದೊಂದಿಗೆ ನಿರ್ವಹಿಸಬೇಕು. ಕಾಮಗಾರಿ ನಿರ್ವಹಣೆಯಲ್ಲಿ ಅವೈಜ್ಞಾನಿಕ ಹಾಗೂ ಲೋಪ ಕಂಡು ಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ತಿಳಿಸಿದರು.

ನಾವು ಕಳೆದ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜನರ ಬಳಿಗೆ ಬಂದಾಗ ಜನರು ಹಲವಾರು ಬೇಡಿಕೆಗಳನ್ನು ಇಟ್ಟಿದ್ದರು ಅವರ ಬೇಡಿಕೆಯಂತೆ ಕೆಲಸ ಮಾಡುತ್ತಿದ್ದೆವೆ. ಅನೇಕ ವರ್ಷಗಳಿಂದ ನಮಗೆ ಆಶೀರ್ವಾದ ಮಾಡಿದ್ಧೀರಿ. ಮುಂದೆಯೂ ನಿಮ್ಮೆಲ್ಲರ ಸಹಕಾರ ಇರಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಯೋಜನ ಪ್ರಾದಿಕಾರ ಅದ್ಯಕ್ಷರಾದ ಅಬ್ದುಲ್ ಗಫೂರ್ ಸಾಬ್, ಕಾಂಗ್ರೆಸ್ ಮುಖಂಡರಾದ ಶರಣಯ್ಯ ನಾಯಕ್, ಗ್ಯಾರಂಟಿ ಯೋಜನೆಗಳ ಮಾನ್ವಿ ತಾಲೂಕ ಅಧ್ಯಕ್ಷರಾದ ಬಿಕೆ ಅಮರೇಶಪ್ಪ, ದೊಡ್ಡ ಬಸನಗೌಡ, ಸುಭಾಸ್ ನಾಯಕ, ತಿಪ್ಪಣ್ಣ ಬಾಗಲವಾಡ, ಖಾಲಿದ್ ಗುರು, ಶಿವಕುಮಾರ್ ಬಾಗಲವಾಡ, ಬೊಮ್ಮನಾಳ, ದೇವೇಂದ್ರಪ್ಪ, ಹಿರಿಯರಾದ ಶಿವಮೂರ್ತಿ ರುದ್ರಪ್ಪ ಅಂಗಡಿ ಶೇಖರ್ ರೆಡ್ಡಿ, ಬೀರಪ್ಪ, ಸತ್ತರ ಬಂಗಲೆವಾಲ, ಸತ್ಯನಾರಾಯಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande