ನಾಳೆ ಹೊಸಪೇಟೆ ವಿಭಾಗದಲ್ಲಿ ಕೆಕೆಎಸ್‍ಆರ್‍ಟಿಸಿ ಬಸ್‍ಗಳ ವ್ಯತ್ಯಯ
ಹೊಸಪೇಟೆ, 08 ನವೆಂಬರ್ (ಹಿ.ಸ.) : ಆ್ಯಂಕರ್ : ನವೆಂಬರ್.9 ರಂದು ಕೂಡ್ಲಿಗಿಯಲ್ಲಿ ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮ ನಿಮಿತ್ತ ಸಾಂದರ್ಭಿಕ ಒಪ್ಪಂದದ ಮೇಲೆ ವಾಹನಗಳ
ನಾಳೆ ಹೊಸಪೇಟೆ ವಿಭಾಗದಲ್ಲಿ ಕೆಕೆಎಸ್‍ಆರ್‍ಟಿಸಿ ಬಸ್‍ಗಳ ವ್ಯತ್ಯಯ


ಹೊಸಪೇಟೆ, 08 ನವೆಂಬರ್ (ಹಿ.ಸ.) :

ಆ್ಯಂಕರ್ : ನವೆಂಬರ್.9 ರಂದು ಕೂಡ್ಲಿಗಿಯಲ್ಲಿ ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮ ನಿಮಿತ್ತ ಸಾಂದರ್ಭಿಕ ಒಪ್ಪಂದದ ಮೇಲೆ ವಾಹನಗಳನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕಾಗಿರುವ ಹಿನ್ನಲೆಯಲ್ಲಿ ನಾಳೆ ಹೊಸಪೇಟೆ ವಿಭಾಗದ ವ್ಯಾಪ್ತಿಯಲ್ಲಿನ ಮಾರ್ಗಗಳಲ್ಲಿ ಬಸ್ ವಾಹನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಮತ್ತು ಪ್ರಯಾಣಿಕರು ಸಹಕರಿಸಬೇಕೆಂದು ವಿಜಯನಗರದ ಕೆಕೆಎಸ್‍ಆರ್‍ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande