
ನವದೆಹಲಿ, 08 ನವೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಕಾನೂನು ನೆರವು ವಿತರಣಾ ಕಾರ್ಯವಿಧಾನವನ್ನು ಬಲಪಡಿಸುವುದು ಎಂಬ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ಎನ್‌ಎಎಲ್‌ಎಸ್‌ಎ)ದ ಆಶ್ರಯದಲ್ಲಿ ಆಯೋಜಿಸಲಾದ ಈ ಎರಡು ದಿನಗಳ ಸಮ್ಮೇಳನದಲ್ಲಿ ಸಮುದಾಯ ಮಧ್ಯಸ್ಥಿಕೆ ತರಬೇತಿ ಮಾಡ್ಯೂಲ್ ಅನ್ನು ಪ್ರಧಾನಿಯವರು ಅನಾವರಣಗೊಳಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಉದ್ಘಾಟನಾ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಸಮ್ಮೇಳನದಲ್ಲಿ ಕಾನೂನು ನೆರವು ರಕ್ಷಣಾ ಸಮಾಲೋಚನೆ ವ್ಯವಸ್ಥೆ, ವಕೀಲರ ಸಮಿತಿ, ಪ್ಯಾರಾ-ಲೀಗಲ್ ಸ್ವಯಂಸೇವಕರು, ಶಾಶ್ವತ ಲೋಕ ಅದಾಲತ್‌ಗಳು ಹಾಗೂ ಕಾನೂನು ಸೇವಾ ಸಂಸ್ಥೆಗಳ ಹಣಕಾಸು ನಿರ್ವಹಣೆ ಮುಂತಾದ ಕಾನೂನು ಸೇವಾ ಚೌಕಟ್ಟಿನ ಪ್ರಮುಖ ಅಂಶಗಳ ಕುರಿತು ಚರ್ಚೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa