ನವೆಂಬರ್ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ
ಹೊಸಪೇಟೆ, 08 ನವೆಂಬರ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನಲ್ಲಿ ‘ವಿಶೇಷ ಚೇತನ ಮಕ್ಕಳ ದತ್ತು ಪ್ರಕ್ರಿಯೆ’ ಎಂಬ ಘೋಷವಾಕ್ಯದೊಂದಿಗೆ ಈ ನವೆಂಬರ್ ತಿಂಗಳನ್ನು ಅಂತಾರಾಷ್ಟ್ರೀಯ ದತ್ತು ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅ
ನವೆಂಬರ್ ತಿಂಗಳನ್ನು ಅಂತರಾಷ್ಟ್ರೀಯ ದತ್ತು ಮಾಸಾಚರಣೆ.


ಹೊಸಪೇಟೆ, 08 ನವೆಂಬರ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನಲ್ಲಿ ‘ವಿಶೇಷ ಚೇತನ ಮಕ್ಕಳ ದತ್ತು ಪ್ರಕ್ರಿಯೆ’ ಎಂಬ ಘೋಷವಾಕ್ಯದೊಂದಿಗೆ ಈ ನವೆಂಬರ್ ತಿಂಗಳನ್ನು ಅಂತಾರಾಷ್ಟ್ರೀಯ ದತ್ತು ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.

ಪ್ರತಿ ಮಗುವೂ ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವನ್ನು ಕಲ್ಪಿಸುತ್ತದೆ. ಈ ನಿಟ್ಟಿನಲ್ಲಿ ಅನಾಥ, ಪರಿತ್ಯಕ್ತ ಹಾಗೂ ಒಪ್ಪಿಸಲ್ಪಟ್ಟ ಮಕ್ಕಳ ಪುನರ್ವಸತಿಗೆ ನೆರವಾಗುವುದು ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಯ ಉದ್ದೇಶವಾಗಿದೆ.

(Adoption of Children having Special Needs) ವಿಶೇಷ ಚೇತನ ಮಕ್ಕಳ ದತ್ತು ಪ್ರಕ್ರಿಯೆ’ ಎನ್ನುವ ಘೋಷವಾಕ್ಯದೊಂದಿಗೆ ಈ ವರ್ಷವೂ ನವೆಂಬರ್ ತಿಂಗಳನ್ನು ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಪೋಷಕತ್ವ ಯೋಜನೆ ಕಾನೂನು ಬದ್ದ ದತ್ತು ಹಾಗೂ ಕಾನೂನು ಬಾಹಿರ ದತ್ತು ಅಪರಾಧ, ಮಕ್ಕಳ ಮಾರಾಟ ನಿಷೇಧ , ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ 2015, ಸೆಕ್ಷನ್ 60, 81 ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ 1 ಲಕ್ಷ ರೂ.ಗಳ ದಂಡ ವಿಧಿಸಬಹುದು.

ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮಿಲಾಗಿದ್ದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆ, ಸಾರ್ವಜನಿಕರ ಗಮನಕ್ಕೆ ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿ ಕಂಡುಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದೂ: 08394-200091 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande