ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ‘ರಾಜಾತಿಥ್ಯ’ ವಿಡಿಯೋ ವೈರಲ್
ಬೆಂಗಳೂರು, 08 ನವೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೆ ‘ಖುಲ್ಲಂ ಖುಲ್ಲಾ’ ಜೀವನ ಶೈಲಿ ಚರ್ಚೆಗೆ ಗ್ರಾಸವಾಗಿದೆ. ಕೆಲ ವರ್ಷಗಳ ಹಿಂದೆ ನಟ ದರ್ಶನ್‌ಗೆ ಜೈಲಿನೊಳಗೆ ಸಿಕ್ಕ ವಿಶೇಷ ಸೌಲಭ್ಯಗಳ ವಿಚಾರ ಸುಪ್ರೀಂ ಕೋರ್ಟ್‌ನ ಗಮನ ಸೆಳೆದಿದ್ದರೆ, ಈಗ ವಿ
Jail


ಬೆಂಗಳೂರು, 08 ನವೆಂಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೆ ‘ಖುಲ್ಲಂ ಖುಲ್ಲಾ’ ಜೀವನ ಶೈಲಿ ಚರ್ಚೆಗೆ ಗ್ರಾಸವಾಗಿದೆ.

ಕೆಲ ವರ್ಷಗಳ ಹಿಂದೆ ನಟ ದರ್ಶನ್‌ಗೆ ಜೈಲಿನೊಳಗೆ ಸಿಕ್ಕ ವಿಶೇಷ ಸೌಲಭ್ಯಗಳ ವಿಚಾರ ಸುಪ್ರೀಂ ಕೋರ್ಟ್‌ನ ಗಮನ ಸೆಳೆದಿದ್ದರೆ, ಈಗ ವಿಕೃತಿ ಕಾಮಿ ಉಮೇಶ್ ರೆಡ್ಡಿ ಮತ್ತು ಗೋಲ್ಡ್ ಸ್ಮಗ್ಲಿಂಗ್‌ ಕೇಸ್‌ನ ಆರೋಪಿ ನಟಿ ರನ್ಯಾ ರಾವ್ ಪ್ರಿಯಕರ ತರುಣ್ ರಾಜ್ ಇಬ್ಬರೂ ಜೈಲಿನೊಳಗೆ ರಾಜ್ಯಾತಿಥ್ಯ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ದೋಷಿಯಾಗಿ, ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಉಮೇಶ್ ರೆಡ್ಡಿ, ಜೈಲಿನೊಳಗೆ ಟಿವಿ ವೀಕ್ಷಣೆ, ಮೊಬೈಲ್‌ನಲ್ಲಿ ಮಾತನಾಡುತ್ತಿರುವ ದೃಶ್ಯಗಳು ಬೆಳಕಿಗೆ ಬಂದಿವೆ.

ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್ ಪ್ರಿಯಕರ ನಟ ತರುಣ್ ರಾಜ್ ಕೂಡ ಇದೇ ರೀತಿಯ ರಾಜಾತಿಥ್ಯ ಸೌಲಭ್ಯ ಅನುಭವಿಸುತ್ತಿದ್ದು, ಜೈಲಿನೊಳಗೆ ಮೊಬೈಲ್‌ ಮತ್ತು ಟಿವಿ ಸೌಲಭ್ಯ ಬಳಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಪರಪ್ಪನ ಅಗ್ರಹಾರ ಜೈಲು ಈಗಾಗಲೇ ಕೈದಿಗಳಿಗೆ ವಿಶೇಷ ಸೌಲಭ್ಯ ನೀಡುವ ವಿಚಾರಕ್ಕೆ ಹೆಸರುವಾಸಿಯಾಗಿದ್ದು, ಈ ಹಿಂದೆ ನಟ ದರ್ಶನ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಈಗ ಮತ್ತೆ ಇದೇ ರೀತಿಯ ಘಟನೆಗಳು ಮರುಕಳಿಸಿರುವುದು ಕಾರಾಗೃಹ ಇಲಾಖೆಯ ಶಿಸ್ತು, ಪಾರದರ್ಶಕತೆ ಕುರಿತಾಗಿ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande