
ಬೆಂಗಳೂರು, 08 ನವೆಂಬರ್ (ಹಿ.ಸ.) :
ಆ್ಯಂಕರ್ : ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ ನಿನ್ನೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಸಕ್ಕರೆ ಕಾರ್ಖಾನೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರೆಲ್ಲರ ಸಮ್ಮುಖದಲ್ಲಿಯೇ ಈ ತೀರ್ಮಾನವಾಗಿದೆ. ಜೂನ್ ನಲ್ಲಿ ಜಿಲ್ಲಾಧಿಕಾರಿಗಳು ಹೇಳುವವರಿಗೆ 3200 ರೂ.ಗಳಿಗೆ ಅವರು ಒಪ್ಪಿರಲಿಲ್ಲ. ನಂತರದಲ್ಲಿ ಒಪ್ಪಿಕೊಂಡರು.50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ ಪಾವತಿಸಲಿದೆ. 10.25 ರಿಕವರಿ ಇದ್ದರೆ 3100 ರೂ.ಜೊತೆಗೆ 100 ರೂ.ಗಳು, ಹಾಗೂ 11.25 ರಿಕವರಿ ಇದ್ದರೆ 3200 ಜೊತೆಗೆ 100 ರೂ. ಸೇರಿದಂತೆ ಒಟ್ಟು 3300 ಒದಗಿಸಲಾಗುವುದು ಎಂದರು.
ಈ ಬಗ್ಗೆ ಸರ್ಕಾರದ ಆದೇಶ ಹೊರಡಿಸಲಾಗುವುದು. ಸಚಿವ ಶಿವಾನಂದ ಪಾಟೀಲ, ರೈತರ ಸಮ್ಮುಖದಲ್ಲಿ ಘೋಷಣೆ ಮಾಡಲಿದ್ದಾರೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa