
ಕೂಡ್ಲಿಗಿ, 08 ನವೆಂಬರ್ (ಹಿ.ಸ.) :
ಆ್ಯಂಕರ್ : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಸುರೇಶ್ ಅವರು ನವೆಂಬರ್.9 ರಂದು ಕೂಡ್ಲಿಗಿ ನಗರಕ್ಕೆ ಆಗಮಿಸಲಿದ್ದು, ಜಲಸಂಪನ್ಮೂಲ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿರುವ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನ.9 ರಂದು ಬೆಳಿಗ್ಗೆ.10 ಗಂಟೆಗೆ ಬೆಂಗಳೂರಿನ ಹೆಚ್‍ಎಎಲ್. ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಡುವ ಅವರು, 10:50 ಕ್ಕೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ಏರ್‍ಸ್ಟ್ರಿಪ್‍ಗೆ ಆಗಮಿಸುವರು. ಬೆಳಿಗ್ಗೆ 11 ಕ್ಕೆ ಜಿಂದಾಲ್ ಏರ್‍ಸ್ಟ್ರಿಪ್ ನಿಂದ ಹೆಲಿಕಾಪ್ಟರ್ ಮೂಲಕ ಹೊರಟು 11:30 ಕ್ಕೆ ಹರಪನಹಳ್ಳಿಯ ಸ್ಥಳೀಯ ಕಾರ್ಯಕ್ರಮ. ಬಳಿಕ ಮ.12.30 ಕ್ಕೆ ಹರಪನಹಳ್ಳಿನಿಂದ ಹೆಲಿಕ್ಯಾಪ್ಟರ್ ಮೂಲಕ ಕೂಡ್ಲಿಗಿ ಪಟ್ಟಣಕ್ಕೆ ಆಗಮಿಸಲಿದ್ದಾರೆ.
74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ, ಸಂಜೆ.4 ಗಂಟೆಗೆ ಕೂಡ್ಲಿಗಿ ಪಟ್ಟಣದಿಂದ ಹೆಲಿಕ್ಯಾಪ್ಟರ್ ಮೂಲಕ 4:15 ಕ್ಕೆ ಜಿಂದಾಲ್ ಏರ್‍ಸ್ಟ್ರಿಪ್ ತೋರಣಗಲ್ಲು ತಲುಪಿ, 4:25 ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರು ಹೆಚ್‍ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್