ಗೌರವ ಪ್ರಶಸ್ತಿಗಾಗಿ ಅರ್ಹ ಪತ್ರಕರ್ತರಿಂದ ಅರ್ಜಿ ಆಹ್ವಾನ
ಧಾರವಾಡ, 09 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪ್ರತಿ ವರ್ಷ ಹಿರಿಯ ಪತ್ರಕರ್ತರ ಸೇವೆಯನ್ನು ಗುರುತಿಸಿ, ಅವರಿಗೆ ಗೌರವ ಪ್ರಶಸ್ತಿಗಳನ್ನು ನೀಡುತ್ತದೆ. 2025 ನೇ ಸಾಲಿನ ಹಿರಿಯ ಪತ್ರಕರ್ತರ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 20
ಗೌರವ ಪ್ರಶಸ್ತಿಗಾಗಿ ಅರ್ಹ ಪತ್ರಕರ್ತರಿಂದ ಅರ್ಜಿ ಆಹ್ವಾನ


ಧಾರವಾಡ, 09 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪ್ರತಿ ವರ್ಷ ಹಿರಿಯ ಪತ್ರಕರ್ತರ ಸೇವೆಯನ್ನು ಗುರುತಿಸಿ, ಅವರಿಗೆ ಗೌರವ ಪ್ರಶಸ್ತಿಗಳನ್ನು ನೀಡುತ್ತದೆ. 2025 ನೇ ಸಾಲಿನ ಹಿರಿಯ ಪತ್ರಕರ್ತರ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮ ಕ್ಷೇತ್ರದಲ್ಲಿ 20 ವರ್ಷಗಳ ಸೇವೆ ಸಲ್ಲಿಸಿರುವ 50 ವರ್ಷ ಮೇಲ್ಪಟ್ಟರುವ ಪತ್ರಕರ್ತರ ಹೆಸರು, ವಯಸ್ಸು, ವಿಳಾಸ, ದೂರವಾಣಿ ಸಂಖ್ಯೆಯೊಂದಿಗೆ ಅವರ ಸಾಧನೆಯ ಕಿರು ಪರಿಚಯವನ್ನು ನವೆಂಬರ್ 20, 2025 ರೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ. ಬಿ.ಆರ್. ಅಂಬೇಡ್ಕರ್ ವೀಧಿ ಬೆಂಗಳೂರು-560001 ಇವರಿಗೆ ಅಂಚೆಯ ಮೂಲಕ ಸಲ್ಲಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande