
ವಿಜಯಪುರ, 09 ನವೆಂಬರ್ (ಹಿ.ಸ.) :
ಆ್ಯಂಕರ್ : ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಹಾಗೂ ಮಕ್ಕಳಿಗೆ ತಕ್ಷಣ ರಕ್ಷಣೆ, ಸಹಾನುಭೂತಿ ಹಾಗೂ ಸಮುದಾಯ ಸೇವೆ ಒದಗಿಸುವ ಯೋಜನೆಯಾಗಿರುವ ಅಕ್ಕ ಪಡೆಗೆ ತಂಡ ರಚನೆ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಂಡದಲ್ಲಿ ಎನ್ ಸಿಸಿ“ಸಿ” ಪ್ರಮಾಣ ಪತ್ರ ಹೊಂದಿದ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯೂ 35 ರಿಂದ 45 ವರ್ಷ ವಯಸ್ಸಿನೊಳಗಿನ ದೈಹಿಕ ಸಧೃಡತೆ ಹೊಂದಿರುವ ಸ್ಥಳೀಯ ನಿವಾಸಿಯಾಗಿರುವ ಮಹಿಳಾ ಅಭ್ಯರ್ಥಿಗಳು ನವೆಂಬರ್ 12 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ, ಮೊಬೈಲ್ ಸಂಖ್ಯೆ: 9480804206 ಹಾಗೂ 9844788272 ಮತ್ತು wedbijapur@yahoo.co.in ಗೆ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande