ಮೋಹನ್ ಭಾಗವತ್ ಹೇಳಿಕೆಗೆ ಹರಿಪ್ರಸಾದ ಆಕ್ಷೇಪ
ಬೆಂಗಳೂರು, 09 ನವೆಂಬರ್ (ಹಿ.ಸ.) : ಆ್ಯಂಕರ್ : ಭಾರತ ಹಿಂದೂ ರಾಷ್ಟ್ರವೋ, ಜಾತ್ಯಾತೀತ ರಾಷ್ಟ್ರವೋ ಎನ್ನುವುದು ದೇಶದ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ನೊಂದಣಿ ಇಲ್ಲದ ಸಂಘಟನೆಯ ನಾಯಕರು ಹೇಳಿದ ತಕ್ಷಣ ದೇಶ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ. ದೇಶ ನಡೆಯುತ್ತಿರುವುದು ಸಂವಿಧಾನದ ತಳಹದಿಯ ಮೇಲೆಯೇ ಹೊರತ
Bkh


ಬೆಂಗಳೂರು, 09 ನವೆಂಬರ್ (ಹಿ.ಸ.) :

ಆ್ಯಂಕರ್ : ಭಾರತ ಹಿಂದೂ ರಾಷ್ಟ್ರವೋ, ಜಾತ್ಯಾತೀತ ರಾಷ್ಟ್ರವೋ ಎನ್ನುವುದು ದೇಶದ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ನೊಂದಣಿ ಇಲ್ಲದ ಸಂಘಟನೆಯ ನಾಯಕರು ಹೇಳಿದ ತಕ್ಷಣ ದೇಶ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ. ದೇಶ ನಡೆಯುತ್ತಿರುವುದು ಸಂವಿಧಾನದ ತಳಹದಿಯ ಮೇಲೆಯೇ ಹೊರತು ಮನುಸ್ಮೃತಿಯ ಪ್ರತಿಪಾದನೆಯ ಮೇಲಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ ಹೇಳಿದ್ದಾರೆ.

ಭಾರತದಲ್ಲಿರುವವರೆಲ್ಲರೂ ಹಿಂದುಗಳಾದರೇ ಇದೇ ನೆಲದಲ್ಲಿ ವಾಸಿಸುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಪಾರ್ಸಿ ಧರ್ಮಗಳನ್ನ ಹಿಂದೂಗಳೆಂದು ಪರಿಗಣಿಸುತ್ತಾರಾ ಎಂದು ಸ್ಪಷ್ಟಪಡಿಸಲಿ. ಹಿಂದೂ ರಾಷ್ಟ್ರದ ಕಲ್ಪನೆಯೇ ಸ್ವತಃ ಆರ್.ಎಸ್.ಎಸ್ ಗೆ ಗೊಂದಲ ಇರುವಾಗ ದೇಶವನ್ನು ಹಿಂದೂ ರಾಷ್ಟ್ರವೆಂದು ದಾರಿ ತಪ್ಪಿಸುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಬ್ರಿಟಿಷರ ಪರವಾಗಿದ್ದವರು ಬ್ರಿಟಿಷರ ಕಾಲದಲ್ಲಿ ನೊಂದಣಿಯಾಗದೆ ಇರುವುದರಲ್ಲಿ ಯಾವ ಆಶ್ಚರ್ಯವೂ ಇಲ್ಲ ಆದರೆ ಸಂವಿಧಾನದಡಿಯಲ್ಲಿ ಕಾನೂನಿಗೆ ಗೌರವ ಕೊಟ್ಟು ನೊಂದಣಿ ಮಾಡಿಕೊಳ್ಳದೆ ಕಾನೂನನ್ನೇ ಧಿಕ್ಕರಿಸುತ್ತಿರುವುದು ಯಾಕೆ ಎನ್ನುವುದನ್ನು ದೇಶದ ಜನರಿಗೆ ಉತ್ತರಿಸಲಿ.

ರಾಜಕೀಯವನ್ನು ನಿಯಂತ್ರಿಸುವುದಿಲ್ಲ ಎನ್ನುವುದು ಮೋಹನ್ ಭಾಗವತ್ ರ ಹಸಿ ಹಸಿ ಸುಳ್ಳಿಗೆ ನಿದರ್ಶನ. ರಾಜಕೀಯ ನಿಯಂತ್ರಣ ಇಲ್ಲ ಎಂದಾದರೆ ಬಿಜೆಪಿಯನ್ನು ನಿಯಂತ್ರಿಸುತ್ತಿರುವುದು ಯಾರು? ಯಾರ ಬಾಲಗೋಂಚಿಯಂತೆ ಬಿಜೆಪಿ ವರ್ತಿಸುತ್ತಿರುವುದು ಜಗತ್ತಿಗೇ ಗೊತ್ತಿರುವ ಸತ್ಯವಲ್ಲವೇ? ಸಂಘಟನೆಯ ಮುಖ್ಯಸ್ಥರೇ ಸುಳ್ಳುಗಳನ್ನು ಹೆಣಿಯುವಾಗ, ಸಂಘ ಪರಿವಾರ ಸುಳ್ಳನ್ನು ಹೇಳದೆ ಇರಲು ಸಾಧ್ಯವೇ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande