ಕೆಕೆಆರ್ ಡಿಬಿಯಿಂದ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ : ಎನ್ಎಸ್ ಬೋಸರಾಜು
ರಾಯಚೂರು, 09 ನವೆಂಬರ್ (ಹಿ.ಸ.) : ಆ್ಯಂಕರ್ : ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉತ್ತಮ‌ ಗುಣಮಟ್ಟದ ಚಿಕಿತ್ಸೆಗಾಗಿ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಸೇರಿ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆಸ್ಪತ್ರೆಗಳ ಕಟ್ಟಡ ನಿರ್ಮಾಣ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕಲ್ಯಾಣ ಕರ್ನಾಟಕ ವ
ಕೆಕೆಆರ್ ಡಿಬಿಯಿಂದ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ : ಎನ್ಎಸ್ ಬೋಸರಾಜು


ಕೆಕೆಆರ್ ಡಿಬಿಯಿಂದ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ : ಎನ್ಎಸ್ ಬೋಸರಾಜು


ರಾಯಚೂರು, 09 ನವೆಂಬರ್ (ಹಿ.ಸ.) :

ಆ್ಯಂಕರ್ : ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉತ್ತಮ‌ ಗುಣಮಟ್ಟದ ಚಿಕಿತ್ಸೆಗಾಗಿ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಸೇರಿ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆಸ್ಪತ್ರೆಗಳ ಕಟ್ಟಡ ನಿರ್ಮಾಣ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕಲ್ಯಾಣ ಕರ್ನಾಟಕ ವ್ಯಾಪ್ತಿಯ 7 ಜಿಲ್ಲೆಗಳನ್ನು ಒಳಗೊಂಡಂತೆ ಆರೋಗ್ಯ ಕ್ಷೇತ್ರಕ್ಕೆ ಮೂಲಸೌಲಭ್ಯ ಒದಗಿಸಲು 850 ಕೋಟಿ ರೂ. ವಿಶೇಷ ಅನುದಾನ ನೀಡಲಾಗಿದೆ ಎಂದು ಸಚಿವ ಎನ್ ಎಸ್ ಬೋಸರಾಜು ಅವರು ತಿಳಿಸಿದರು.

ಸಿರವಾರ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳಿಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 2 ಕೋಟಿ ರೂ ವೆಚ್ಚದಲ್ಲಿ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಚಿವ ಎನ್ ಎಸ್ ಬೋಸರಾಜು ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

ಕಾಂಗ್ರೆಸ್‌ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಲಾಗಿದೆ.

ಕಲ್ಯಾಣ ಕರ್ನಾಟಕದಲ್ಲಿ ಆರೋಗ್ಯ ಕೇಂದ್ರ ಕೊರತೆ ನೀಗಿಸಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚುವರಿ ವೈದ್ಯರ ನೇಮಿಸುವ ಮೂಲಕ ಉನ್ನತ ಮಟ್ಟದ ಚಿಕಿತ್ಸೆ ದೊರಕಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗ ಆರೋಗ್ಯ ಕ್ಷೇತ್ರಕ್ಕೆ 850 ಕೋಟಿ ರೂ. ಅನುದಾನ ನೀಡಿ, ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಿದ್ದೇವೆ ಎಂದು ತಿಳಿಸಿದರು.

ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಯವರು ಸಮಯ ನೋಡದೆ ತುರ್ತ್ ಸಂದರ್ಭದಲ್ಲಿಯೂ ಜನರ ಸೇವೆ ಮಾಡಬೇಕು. ವೈದ್ಯಕೀಯ ಸೇವೆ ಮಾಡುವುದರಿಂದ ಪುಣ್ಯ ಬರಲಿದೆ. ಸಿಬ್ಬಂದಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ. ಸುರೇಂದ್ರ ಬಾಬು, ತಾಲೂಕ ವೈದ್ಯಾದಿಕಾರಿಗಳು, ತಹಶೀಲ್ದಾರರಾದ ಅಶೋಕ ಪವಾರ್, ಇಓ‌ ಶಶಿದರ್ ಸ್ವಾಮಿ, ತಾಲೂಕ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಅಬ್ದುಲ್ ಗಪೂರು ಸಾಬ್, ಮುಖಂಡರಾದ ಚುಕ್ಕಿ ಸೂಗಪ್ಪ, ಶರಣಯ್ಯ ನಾಯಕ್, ಚುಕ್ಕಿ ಶಿವಕುಮಾರ್, ಭೂಪನಗೌಡ, ಅರಕೇರಾ ಶಿವಕುಮಾರ್,‌ ಖಾದ್ರಿ ಸಿರವಾರ್, ಶಿವಾನಂದ, ಬಸವರಾಜ, ರಮೇಶ ದರ್ಶನಕರ್, ನಾಗಪ್ಪ ನವಲಕಲ್, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ ಸೇರಿದಂತೆ ಅನೇಕರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande