
ಶಿವಮೊಗ್ಗ, 09 ನವೆಂಬರ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಛಲವಾದಿ ಮಹಾಸಭಾ ಇವರ ಸಂಯುಕ್ತಾಶ್ರಯದಲ್ಲಿ ನ.11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗದಿರಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸಲಿದ್ದು, ಭದ್ರಾವತಿ ಶಾಸಕ ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಸಾಗರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪೊಲೀಸ್ ವರಿಷ್ಠಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರು ಹಾಗೂ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕುಂದನ್ ಬಸವರಾಜ್ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa