ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಕರ್ನಾಟಕ ಪ್ರವಾಸ
ಬೆಂಗಳೂರು, 09 ನವೆಂಬರ್ (ಹಿ.ಸ.) : ಆ್ಯಂಕರ್ : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಅಧಿಕೃತ ಭೇಟಿಗಾಗಿ ಇಂದು ಕರ್ನಾಟಕಕ್ಕೆ ಆಗಮಿಸಿದರು. ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಬ
Vice President


ಬೆಂಗಳೂರು, 09 ನವೆಂಬರ್ (ಹಿ.ಸ.) :

ಆ್ಯಂಕರ್ : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಅಧಿಕೃತ ಭೇಟಿಗಾಗಿ ಇಂದು ಕರ್ನಾಟಕಕ್ಕೆ ಆಗಮಿಸಿದರು.

ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ಭೇಟಿ ವೇಳೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು, ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಪರಮಪೂಜ್ಯ ಆಚಾರ್ಯ ಶ್ರೀ 108 ಶಾಂತಿ ಸಾಗರ್ ಮಹಾರಾಜ್ ಜಿ ಅವರ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು ಆಚಾರ್ಯ ಶಾಂತಿ ಸಾಗರ್ ಮಹಾರಾಜ್ ಅವರ 1925ರ ಶ್ರವಣಬೆಳಗೊಳ ಮೊದಲ ಪ್ರವಾಸದ ಶತಮಾನೋತ್ಸವದ ಅಂಗವಾಗಿದೆ.

ಈ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳು ಆಚಾರ್ಯ ಶಾಂತಿ ಸಾಗರ್ ಮಹಾರಾಜ್ ಅವರ ವಿಗ್ರಹ ಪ್ರತಿಷ್ಠಾಪನೆ ಹಾಗೂ ನಾಲ್ಕನೇ ಬೆಟ್ಟದ ನಾಮಕರಣ ಸಮಾರಂಭದಲ್ಲಿಯೂ ಪಾಲ್ಗೊಳ್ಳಲಿದ್ದಾರೆ.

ನಂತರ ಉಪರಾಷ್ಟ್ರಪತಿಗಳು ಮೈಸೂರಿನ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ 16ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪದವಿ ಪಡೆದ ವಿದ್ಯಾರ್ಥಿಗಳಿಗೆ ಸಂದೇಶ ನೀಡಲಿದ್ದಾರೆ.

ಈ ಕಾರ್ಯಕ್ರಮವು ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ಪ್ರವಾಸದ ಭಾಗವಾಗಿ, ಉಪರಾಷ್ಟ್ರಪತಿಗಳು ಸುತ್ತೂರು ಮಠದ ಹಳೆಯ ಆವರಣ, ಮೈಸೂರು ಚಾಮುಂಡೇಶ್ವರಿ ದೇವಾಲಯ, ಹಾಗೂ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande