
ರಾಯಚೂರು, 01 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಪ್ರತಿ ವರ್ಷದಂತೆ ಈ ವರ್ಷವು ಸಹ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ಕಲಬುರಗಿಯ ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಡಿಸೆಂಬರ್ 07ರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಯಾದಗಿರಿ, ಬೀದರ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಯ ಮಾಜಿ ಸೈನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08472-225003ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್