ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಪುಣ್ಯತಿಥಿ
ಬೆಂಗಳೂರು, 01 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸೌಧದ ನಿರ್ಮಾತೃ ದಿವಂಗತ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ಇಂದು ವಿಧಾನ ಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು. ಈ ಸಂದರ್
Cm


ಬೆಂಗಳೂರು, 01 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸೌಧದ ನಿರ್ಮಾತೃ ದಿವಂಗತ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ಇಂದು ವಿಧಾನ ಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಿವಂಗತ ಕೆಂಗಲ್ ಹನುಮಂತಯ್ಯ ನವರ ಮೊಮ್ಮಗ ಕೆಂಗಲ್ ಶ್ರೀಪಾದ ರೇಣು ಅವರು ಉಪಸ್ಥಿತರಿದ್ದು, ಮುಖ್ಯಮಂತ್ರಿಗಳ ಜೊತೆಗೂಡಿ ಪ್ರತಿಮೆಗೆ ಪುಷ್ಪಗುಚ್ಛ ಸಮರ್ಪಿಸಿದರು.

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೆಂಗಲ್ ಹನುಮಂತಯ್ಯನವರ ನಾಡಿಗೆ ನೀಡಿದ ಕೊಡುಗೆ ಮತ್ತು ಆಡಳಿತಾತ್ಮಕ ದೂರದೃಷ್ಟಿಯನ್ನು ಸ್ಮರಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande