ಪಾದರಕ್ಷೆಗಳ ವ್ಯಾಪಾರ ವಿಸ್ತರಣೆಯಿಂದ ವಿದ್ಯಾರ್ಥಿಗಳು ಉದ್ಯಮಿಗಳಾಗಲು ಸಹಾಯ : ರಾಷ್ಟ್ರಪತಿ ಮುರ್ಮು
ಅಂತಾರಾಷ್ಟ್ರೀಯ
President


ನವದೆಹಲಿ, 01 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಾಗತಿಕ ಮಾರುಕಟ್ಟೆಯಲ್ಲಿ ಪಾದರಕ್ಷೆಗಳ ವ್ಯವಹಾರವನ್ನು ವಿಸ್ತರಿಸುವುದು, ಭಾರತವು ತನ್ನ ಅಂತಾರಾಷ್ಟ್ರೀಯ ಅಸ್ತಿತ್ವವನ್ನು ಬಲಪಡಿಸಲು ಮಾತ್ರವಲ್ಲ, ವಿದ್ಯಾರ್ಥಿಗಳಿಗೆ ಉದ್ಯಮಶೀಲತೆಯ ದಿಕ್ಕಿನತ್ತ ನೇರ ಮಾರ್ಗ ಒದಗಿಸಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ನವದೆಹಲಿಯಲ್ಲಿ ಸೋಮವಾರ ನಡೆದ ಪಾದರಕ್ಷೆ ವಿನ್ಯಾಸ ಮತ್ತು ಅಭಿವೃದ್ಧಿ ಸಂಸ್ಥೆ (ಎಫ್‌ಡಿಡಿಐ)ಯ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ಭಾರತವು ಸ್ವಾವಲಂಬಿಯಾಗಲು ವೇಗವಾಗಿ ಮುಂದುವರಿಯುತ್ತಿದ್ದು, ಜಾಗತಿಕ ಆರ್ಥಿಕ ವೇದಿಕೆಯಲ್ಲಿ ತನ್ನ ಪಾತ್ರವನ್ನು ವಿಸ್ತರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದರು.

ಪಾದರಕ್ಷೆಗಳ ಉತ್ಪಾದನೆ ಮತ್ತು ಬಳಕೆಯಲ್ಲಿ ಭಾರತವು ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ, 2024–25ರಲ್ಲಿ ಭಾರತದ ಪಾದರಕ್ಷೆ ರಫ್ತು $2.5 ಬಿಲಿಯನ್‌ಗಿಂತ ಹೆಚ್ಚಾಗಿದ್ದು, ಆಮದು $680 ಮಿಲಿಯನ್ ಆಗಿದೆ ಎಂದು ಅಂಕಿ-ಅಂಶಗಳನ್ನು ಉಲ್ಲೇಖಿಸಿದರು.

ರಫ್ತು ಪ್ರಮಾಣವು ಆಮದಿಗಿಂತ ನಾಲ್ಕು ಪಟ್ಟು ಹೆಚ್ಚಿದ್ದರೂ, ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ಹಂಚಿಕೆಯನ್ನು ಪಡೆಯಲು ಪಾದರಕ್ಷೆ ಉದ್ಯಮವನ್ನು ಮತ್ತಷ್ಟು ವಿಸ್ತರಿಸುವ ಅಗತ್ಯವಿದೆ ಎಂದು ರಾಷ್ಟ್ರಪತಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande