ದ್ವಿತ್ವಾ ಚಂಡಮಾರುತದ ಪ್ರಭಾವ ; ಬೆಂಗಳೂರಿನಲ್ಲಿ ತೀವ್ರ ಚಳಿ
ಅರಬ್ಬಿ
Diwitva


ಬೆಂಗಳೂರು, 01 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಅರಬ್ಬಿ ಸಮುದ್ರದಲ್ಲಿ ಸಕ್ರಿಯಗೊಂಡಿರುವ ‘ದ್ವಿತ್ವಾ’ ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ನಗರದಲ್ಲಿ ಕಳೆದ ಎರಡು ದಿನಗಳಿಂದ ತೀವ್ರ ಚಳಿ ಹಾಗೂ ಮೋಡ ಕವಿದ ವಾತಾವರಣ ಮುಂದುವರಿದಿದೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಹಗುರ ಮಳೆಯ ಸಾಧ್ಯತೆ ಇದೆ. ಚಂಡಮಾರುತದ ಪರಿಣಾಮವಾಗಿ ಹಗಲಿನ ಗರಿಷ್ಠ ಉಷ್ಣಾಂಶದಲ್ಲಿ ಗಣನೀಯ ಇಳಿಕೆ ಕಂಡುಬರುವುದಾಗಿ ತಿಳಿಸಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಿಗೆ ಹಗುರ ಮಳೆಯ ಎಚ್ಚರಿಕೆ ನೀಡಲಾಗಿದ್ದು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ–ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ಮೂರು ದಿನಗಳ ಕಾಲ ಚಳಿ ಹವಾಮಾನ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 22°C ಮತ್ತು ಕನಿಷ್ಠ 18°C ಕ್ಕೆ ಇಳಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande