ಕೊಪ್ಪಳ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮ ; ಅರ್ಜಿ ಆಹ್ವಾನ
ಕೊಪ್ಪಳ, 01 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಕೊಪ್ಪಳ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಿಗಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನಾಗಳಾದ ಮಾಜಿ ದೇವದಾಸಿ ಮಹಿಳೆ
ಕೊಪ್ಪಳ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮ ; ಅರ್ಜಿ ಆಹ್ವಾನ


ಕೊಪ್ಪಳ, 01 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಕೊಪ್ಪಳ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಿಗಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನಾಗಳಾದ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನಾ ಯೋಜನೆ ಮತ್ತು ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 15ರ ಸಂಜೆ 5.30 ರವರೆಗೆ ಕೊನೆಯ ದಿನವಾಗಿದೆ.

ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕೊಪ್ಪಳ ಅಭಿವೃದ್ಧಿ ನಿರೀಕ್ಷಕರ ಕಚೇರಿ (ದೂ.ಸಂ: 99720 33371) ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande