
ಬಳ್ಳಾರಿ, 01 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ಉದ್ದೇಶಿಸಲಾಗಿದ್ದು, ಭೂಮಾಲೀಕರು ತಮ್ಮ ಜಮೀನುಗಳನ್ನು ನಿಗಮಕ್ಕೆ ಮಾರಾಟ ಮಾಡಲು ಒಪ್ಪಿಗೆ ಪತ್ರ ಹಾಗೂ ಜಮೀನುಗಳಿಗೆ ಸಂಬಂಧಿಸಿದಂತೆ ಇತರೆ ದಾಖಲೆಗಳೊಂದಿಗೆ ಆಕ್ಷೇಪಣೆಗಳಿದ್ದಲ್ಲಿ ಡಿ.05 ರೊಳಗಾಗಿ ನಗರದ ಕೋಟೆ ಪ್ರದೇಶದ ಪಿಡಬ್ಲ್ಯೂಡಿ ಕಚೇರಿ ಹತ್ತಿರದ ಸಂತೋಷಿ ಮಾತಾ ಮಂದಿರದ ಎದುರುಗಡೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಲಿಖಿತವಾಗಿ ಅಕ್ಷೇಪಣೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್