
ಬಳ್ಳಾರಿ, 01 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ ಅವರು ನಾಳೆ ಬಳ್ಳಾರಿಗೆ ಆಗಮಿಸಲಿದ್ದಾರೆ.
ನಾಳೆ ಬೆಳಿಗ್ಗೆ ಬೆಂಗಳೂರಿನಿದ ಹೊರಟು, ಬಳ್ಳಾರಿಗೆ ಆಗಮಿಸುವರು. ಬಳಿಕ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲೆಯ ನಗರಾಭಿವೃದ್ಧಿ ಇಲಾಖೆಗೆ ಸಂಬ0ಧಿಸಿದ0ತೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಸಂಜೆ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟಿಪ್ ಆಗಮಿಸಿ, ಹೋಟೆಲ್ ನಲ್ಲಿ ವಾಸ್ತವ್ಯ ಮಾಡುವರು. ಡಿ.03 ರಂದು ರಾಯಚೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್