
ಬೆಂಗಳೂರು, 01 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಧಾರವಾಡ ಮತ್ತು ಮೈಸೂರಿನಲ್ಲಿ ಆರಂಭಿಸಲು ಉದ್ದೇಶಿಸಿರುವ ಕೌಶಲ್ಯ ತರಬೇತಿ ಸಂಸ್ಥೆಗಳ ಕುರಿತು ವಿಕಾಸ ಸೌಧದಲ್ಲಿ ನಡೆದ ಪವರ್ ಪಾಯಿಂಟ್ ಪ್ರೆಸೆಂಟೇಷನ್ ಅನ್ನು ವೀಕ್ಷಿಸಿದ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ. ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ, ಜಂಟಿ ಕಾರ್ಯದರ್ಶಿಗಳಾದ ಉಮೇಶ್, ಉಪ ಕಾರ್ಮಿಕ ಆಯುಕ್ತರಾದ ಜಾನ್ಸನ್, ಜಂಟಿ ಕಾರ್ಮಿಕ ಆಯುಕ್ತರಾದ ಚಿದಾನಂದ, ಕನಿಷ್ಠ ವೇತನ ಮಂಡಳಿಯ ಅಧ್ಯಕ್ಷರಾದ ಶಕೀಲ್ ಶ್ರೀ ಅವರು ಉಪಸ್ಥಿತರಿದ್ದರು.
ಇದೇ ವೇಳೆ ಅವರು ವಿಕಾಸಸೌಧದಲ್ಲಿ ಕನಿಷ್ಠ ವೇತನ ಜಾರಿ ಕುರಿತ ಸಭೆ ನಡೆಸಿದರು.
ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ. ಜಂಟಿ ಕಾರ್ಮಿಕ ಆಯುಕ್ತರಾದ ಡಾ. ರವಿಕುಮಾರ್, ಕನಿಷ್ಠ ವೇತನ ಮಂಡಳಿಯ ಅಧ್ಯಕ್ಷರಾದ ಶಕೀಲ್ ಶ್ರೀ ಅವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa