ಸೇನೆಯಲ್ಲಿ 24 ವರ್ಷ ಸೇವೆ ಸಲ್ಲಿಸಿ ಮರಳಿದ ಸೈನಿಕನಿಗೆ ಸನ್ಮಾನ
ಹುಬ್ಬಳ್ಳಿ, 01 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನ ಹರ್ಲಾಪುರ ಗ್ರಾಮದ ದಾವಲ್ ಸಾಬ್ ಮೌಲಾಸಾಬ್ ನದಾಫ್ ಅವರು ಭಾರತೀಯ ಸೇನೆಯಲ್ಲಿ 24 ವರ್ಷಗಳ ಕಾಲ ಅಮೂಲ್ಯ ಸೇವೆ ಸಲ್ಲಿಸಿ ನಿವೃತ್ತರಾಗಿ ತಾಯ್ನಾಡಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ವಿಎಕೆ ಫೌಂಡೇಷನ್ ಸಂಸ್ಥಾಪಕ ಅ
Welcomed


ಹುಬ್ಬಳ್ಳಿ, 01 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನ ಹರ್ಲಾಪುರ ಗ್ರಾಮದ ದಾವಲ್ ಸಾಬ್ ಮೌಲಾಸಾಬ್ ನದಾಫ್ ಅವರು ಭಾರತೀಯ ಸೇನೆಯಲ್ಲಿ 24 ವರ್ಷಗಳ ಕಾಲ ಅಮೂಲ್ಯ ಸೇವೆ ಸಲ್ಲಿಸಿ ನಿವೃತ್ತರಾಗಿ ತಾಯ್ನಾಡಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ವಿಎಕೆ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ವೆಂಕಟೇಶ ಕಾಟವೆ ಅವರಿಂದ ಭವ್ಯ ಸ್ವಾಗತ ಕೋರಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೆಂಕಟೇಶ ಕಾಟವೆ, “ನಾವು ನೆಮ್ಮದಿಯಿಂದ ನಿದ್ದೆ ಮಾಡುವಂತಿರುವುದು ಸೈನಿಕರ ತ್ಯಾಗ ಸಾಧ್ಯ. ನಮ್ಮ ಭಾಗದ ದಾವಲಸಾಬ್ ನದಾಫ್ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿರುವುದು ಹೆಮ್ಮೆಯ ಸಂಗತಿ. ಇಂತಹ ದೇಶಭಕ್ತ ಯುವಕರ ಸಂಖ್ಯೆ ಇನ್ನಷ್ಟು ಹೆಚ್ಚಾಗಿ, ದೇಶ ಸೇವೆಯೇ ಈಶ ಸೇವೆ ಎಂಬ ಮನೋಭಾವ ಎಲ್ಲರಲ್ಲೂ ಬೆಳೆಯಲಿ ಎಂದು ಆಶಿಸಿದರು.

ಈ ಕಾರ್ಯಕ್ರಮದಲ್ಲಿ ಎಂ.ಎಲ್. ನದಾಫ್, ಅಶೋಕ ಶಿವಳ್ಳಿ, ಅಪ್ಪಣ್ಣ ನದಾಫ್, ಬಸನಗೌಡ ಪಾಟೀಲ, ಸಂಜೀವ ಚಿಮ್ಮನಕಟ್ಟಿ, ರವಿ ಗರಗದ, ಸಚಿನ್ ಕುಂಡೆ ಸೇರಿದಂತೆ ಹಲವರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande