ಗ್ರಾಮಗಳ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ : ಸಿದ್ದರಾಮಯ್ಯ
ನೆಹರು
Cm


ಬೆಂಗಳೂರು, 01 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಗ್ರಾಮದಿಂದಲೇ ಅಧಿಕಾರ ಕೆಳಗಿನಿಂದ ಮೇಲಕ್ಕೆ ಹೋಗಬೇಕು ಎನ್ನುವ ವಿಕೇಂದ್ರೀಕರಣ ಗಾಂಧಿ, ನೆಹರು, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ. ರಾಜೀವ್ ಗಾಂಧಿಯವರು ಪ್ರಧಾನಿ ಆದಾಗ ಸಂವಿಧಾನ ಪರಿಚ್ಛೇದ 73, 74 ಕ್ಕೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ತಂದರು. ಈ ತಿದ್ದುಪಡಿ ಬರುವವರೆಗೂ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿಯೇ ಇರಲಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಹಿಂದುಳಿದವರ-ದಲಿತರ-ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದ ಅವರು, ಇವತ್ತು ಶೇ50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ. ಇದನ್ನು ವಿರೋಧ ಮಾಡಿದ್ದು ಬಿಜೆಪಿಯ ಉಪಾಧ್ಯಕ್ಷರಾಗಿದ್ದ ರಾಜ್ಯ ಸಭಾ ಸದಸ್ಯ ರಾಮಾ ಜೋಯಿಸ್, ಇದನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ ಬಿಜೆಪಿ ಗೆ ಚಪ್ಪಾಳೆ ತಟ್ಟಬಾರದು ಎಂದರು.

ಬಿಜೆಪಿಯ ರಾಮಾ ಜೋಯಿಸ್ ಮೀಸಲಾತಿ ವಿರೋಧಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದ್ದರು. ಆದರೆ, ಸುಪ್ರೀಂ ಕೋರ್ಟ್ ಮೀಸಲಾತಿ ಪರವಾಗಿ ನಿಂತು ಬಿಜೆಪಿಯ ರಾಮಾ ಜೋಯಿಸ್ ಅರ್ಜಿ ತಿರಸ್ಕರಿಸಿತು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande