ಸೋಮವಾರದ ರಾಶಿ ಫಲ
ಹುಬ್ಬಳ್ಳಿ, 01 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸೋಮವಾರದ ರಾಶಿ ಫಲ *ಮೇಷ ರಾಶಿ.* ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಸಂಬಂಧಿಕರೊಂದಿಗೆ ವಿನಾಕಾರಣ ವಿವಾದಗಳು ಉದ್ಭವಿಸುತ್ತವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವ್ಯ
ಸೋಮವಾರದ ರಾಶಿ ಫಲ


ಹುಬ್ಬಳ್ಳಿ, 01 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸೋಮವಾರದ ರಾಶಿ ಫಲ

*ಮೇಷ ರಾಶಿ.*

ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಸಂಬಂಧಿಕರೊಂದಿಗೆ ವಿನಾಕಾರಣ ವಿವಾದಗಳು ಉದ್ಭವಿಸುತ್ತವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವ್ಯಾಪಾರದಲ್ಲಿ ಹೂಡಿಕೆ ವಿಷಯದಲ್ಲಿ ವಿಳಂಬ ಉಂಟಾಗುತ್ತದೆ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ.

*ವೃಷಭ ರಾಶಿ.*

ದೀರ್ಘಾವಧಿ ಸಾಲದಿಂದ ಒತ್ತಡ ಹೆಚ್ಚಾಗುತ್ತದೆ ಮತ್ತು ಆದಾಯ ಸಾಕಾಗುವಷ್ಟು ದೊರೆಯುವುದಿಲ್ಲ. ಸಣ್ಣ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಹಠಾತ್ ಬದಲಾವಣೆಗಳು ಉಂಟಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ.

*ಮಿಥುನ ರಾಶಿ.*

ಹೊಸ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ. ಪ್ರತಿಯೊಬ್ಬರಲ್ಲೂ ಗೌರವ ಮತ್ತು ಘನತೆ ಹೆಚ್ಚಾಗುತ್ತದೆ ಮತ್ತು ಅಮೂಲ್ಯವಾದ ವಸ್ತುಗಳು ಸಂಗ್ರಹಿಸುತ್ತೀರಿ. ಬಾಲ್ಯದ ಸ್ನೇಹಿತರಿಂದ ಶುಭ ಸುದ್ದಿ ದೊರೆಯುತ್ತದೆ. ಮನೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ.

*ಕಟಕ ರಾಶಿ.*

ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ಹಠಾತ್ ಪ್ರಯಾಣ ಸೂಚನೆಗಳಿವೆ. ಮನೆಯ ಹೊರಗೆ ವಿನಾಕಾರಣ ವಿವಾದಗಳು ಉದ್ಭವಿಸುತ್ತವೆ. ದೇವಾಲಯ ದರ್ಶನದಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ವ್ಯಾಪಾರಗಳು ನಿಧಾನವಾಗುತ್ತವೆ. ಉದ್ಯೋಗಿಗಳಿಗೆ ಸ್ಥಾನಿಕ ಚಲನೆಯ ಸೂಚನೆಗಳಿವೆ.

*ಸಿಂಹ ರಾಶಿ.*

ಸಮಾಜದಲ್ಲಿ ಪ್ರಮುಖರ ಪರಿಚಯ ಉಂಟಾಗುತ್ತದೆ. ದೂರದ ಊರಿನಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಹಣದ ವಿಚಾರದಲ್ಲಿ ಇದ್ದ ತೊಂದರೆಗಳು ನಿವಾರಣೆಯಾಗುತ್ತವೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಶುಭ ಸುದ್ದಿ ಸಿಗುತ್ತದೆ.

*ಕನ್ಯಾ ರಾಶಿ.*

ವ್ಯರ್ಥ ಪ್ರಯಾಣ ಮಾಡಬೇಕಾಗುತ್ತದೆ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ವಹಿಸಬೇಕು. ಭೂ ವಿವಾದಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತವೆ. ಆದಾಯದ ಮಾರ್ಗಗಳು ಕಡಿಮೆಯಾಗುತ್ತವೆ. ವ್ಯಾಪಾರದಲ್ಲಿ ಅಲ್ಪ ಲಾಭ ದೊರೆಯುತ್ತದೆ. ನಿರುದ್ಯೋಗ ಪ್ರಯತ್ನಗಳು ವಿಫಲವಾಗುತ್ತವೆ.

*ತುಲಾ ರಾಶಿ.*

ಹೊಸ ಕೆಲಸಗಳನ್ನು ಕೈಗೆತ್ತಿಕೊಂಡು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಹಳೆಯ ಸ್ನೇಹಿತರನ್ನು ಭೇಟಿ ಮಾಡುತ್ತೀರಿ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಉದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ ಸೌಹಾರ್ದತೆಯಿಂದ ವರ್ತಿಸುತ್ತೀರಿ. ಆರ್ಥಿಕ ಪ್ರಗತಿ ಉಂಟಾಗುತ್ತದೆ.

*ವೃಶ್ಚಿಕ ರಾಶಿ.*

ಶತ್ರುಗಳು ಕೂಡ ಸ್ನೇಹಿತರಾಗಿ , ಪರಸ್ಪರ ಸಹಾಯ ಮಾಡುತ್ತಾರೆ. ಸ್ಥಿರಾಸ್ತಿ ಖರೀದಿ ಪ್ರಯತ್ನಗಳು ಕೂಡಿ ಬರುತ್ತವೆ. ಕುಟುಂಬ ಸದಸ್ಯರಿಂದ ಶುಭ ಸುದ್ದಿ ದೊರೆಯುತ್ತದೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗದಲ್ಲಿ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ.

*ಧನುಸ್ಸು ರಾಶಿ.*

ಕೌಟುಂಬಿಕ ಸಮಸ್ಯೆಗಳು ಕಿರಿಕಿರಿಯನ್ನು ಉಂಟುಮಾಡುತ್ತವೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಸ್ನೇಹಿತರೊಂದಿಗೆ ಕೆಲವು ವ್ಯವಹಾರಗಳಲ್ಲಿ ಭಿನ್ನಾಭಿಪ್ರಾಯಗಳಿರುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ದೈವಿಕ್ಕ ದರ್ಶನಗಳನ್ನು ಪಡೆಯುತ್ತೀರಿ. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಸಂಕಷ್ಟ ಎದುರಾಗುತ್ತದೆ. ಉದ್ಯೋಗಗಳು ಸ್ಥಾನ ಚಲನೆ ಸೂಚನೆಗಳಿವೆ.

*ಮಕರ ರಾಶಿ.*

ಪ್ರಮುಖ ಕೆಲಸಗಳಲ್ಲಿ ಅಡಚಣೆಗಳು ಉಂಟಾಗುತ್ತದೆ. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಸಹೋದರರೊಂದಿಗೆ ವಿವಾದಗಳಿರುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ವ್ಯಾಪಾರ ಪಾಲುದಾರರೊಂದಿಗೆ ಜಾಗರೂಕರಾಗಿರಿ. ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ, ಸಾಕಷ್ಟು ವಿಶ್ರಾಂತಿ ಇರುವುದಿಲ್ಲ.

*ಕುಂಭ ರಾಶಿ.*

ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ಬಾಲ್ಯದ ಗೆಳೆಯರ ಭೇಟಿ ಸಂತಸ ತರುತ್ತದೆ. ಬೆಲೆಬಾಳುವ ವಸ್ತ್ರ, ಆಭರಣ ಖರೀದಿಸಲಾಗುತ್ತದೆ. ವ್ಯಾಪಾರ ವಹಿವಾಟುಗಳು ಹೆಚ್ಚು ಉತ್ಸಾಹದಯಕವಾಗಿರುತ್ತವೆ. ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ ಸಿಗುತ್ತದೆ.

*ಮೀನ ರಾಶಿ.*

ನಿರುದ್ಯೋಗ ಪ್ರಯತ್ನಗಳಲ್ಲಿ ಯಶಸ್ಸು ಸಾಧಿಸುತ್ತೀರಿ ಮತ್ತು ಬೆಲೆಬಾಳುವ ವಸ್ತು ಲಾಭಗಳನ್ನು ಪಡೆಯುತ್ತೀರಿ. ಸಮಾಜದ ಪ್ರಮುಖ ವ್ಯಕ್ತಿಗಳ ಬೆಂಬಲ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳೊಂದಿಗೆ ಮುಂದುವರಿಯುತ್ತೀರಿ. ಉದ್ಯೋಗದಲ್ಲಿ ನಿರೀಕ್ಷಿತ ಬಡ್ತಿ ದೊರೆಯುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande