
ಕೊಪ್ಪಳ, 01 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ಕುಣಿಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಲಾಚನಕೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಡಿ. 3 ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕುಣಿಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳು ಮತ್ತು ಎಲ್ಲಾ ಶಾಲೆಗಳ ಮುಖ್ಯ ಗುರುಗಳು, ಸಹಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಲಾಚನಕೇರಿ ಗ್ರಾಮದ ಸಾರ್ವಜನಿಕರು ಸಮಯಕ್ಕೆ ಸರಿಯಾಗಿ ಸಭೆಗೆ ಹಾಜರಾಗಬೇಕು ಎಂದು ಕುಣಿಕೇರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್