
ವಿಜಯಪುರ, 01 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ಇವರ ಸಹಯೋಗದಲ್ಲಿ ಡಿ.07 ರಂದು ವೃಕ್ಷಥಾನ್ ಪಾರಂಪರಿಕ ಓಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 6 ಗಂಟೆಗೆ ನಗರದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಪಾರಂಪರಿಕ ಓಟಕ್ಕೆ ಚಾಲನೆ ಹಾಗೂ ಬೆಳಿಗ್ಗೆ 9 ಗಂಟೆಗೆ ಬಹುಮಾನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವೃಕ್ಷಥಾನ್ ಪಾರಂಪರಿಕ ಓಟ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ ಖಂಡ್ರೆ ಹಸಿರು ನಿಶಾನೆ ತೋರಿಸಲಿದ್ದು, ಪಾರಂಪರಿಕ ಓಟಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ ಗುಂಡುರಾವ ಚಾಲನೆ ನೀಡಲಿದ್ದಾರೆ.
ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ ಪ್ರತಿ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ್ ಎನ್., ಸರ್ಕಾರ ನವದೆಹಲಿ ವಿಶೇಷ ಪ್ರತಿನಿಧಿ-2 ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ನಿಯಮಿತ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭೆ ಸದಸ್ಯರಾದ ಡಾ.ಸುಧಾಮೂರ್ತಿ, ಶಾಸಕರುಗಳಾದ ಯಶವಂತರಾಯಗೌಡ ವ್ಹಿ.ಪಾಟೀಲ, ಹಣಮಂತ ಆರ್.ನಿರಾಣಿ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕಧೋಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮನಗೂಳಿ, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಬಿ.ಎಸ್.ಕವಲಗಿ, ಮಹಾಪೌರ ಮಡಿವಾಳಪ್ಪ ಕರಡಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಬಿನ್ ಮೈಬೂಬ್ ಬೋರಾಮಣಿ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande