





ಕೊಪ್ಪಳ, 01 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ನಿಯಂತ್ರಣ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಸ್ನೇಹ ಮಹಿಳಾ ಸಂಘ, ಚೈತನ್ಯ ನಗರ ಮತ್ತು ಗ್ರಾಮೀಣ ಅಭಿವೃಧ್ದಿ ಸಂಸ್ಥೆ, ಸುರಕ್ಷ ಸಿ.ಎಸ್.ಸಿ, ಶ್ರೀ ಗವಿಸಿದ್ದೇಶ್ವರ ಕಲಾ ವಾಣಿಜ್ಯ ಮತ್ತು ವಿಜ್ಙಾನ ಹಾಗೂ ವಿವಿಧ ಸರ್ಕಾರೇತರ ಸಂಘ ಸಂಸ್ಥೆಗಳು ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರಂದು ಶ್ರೀ ಗವಿಸಿದ್ದೇಶ್ವರ ಪದವಿ ಕಾಲೇಜಿನ ಸಭಾ ಭವನದಲ್ಲಿ ವಿಶ್ವ ಏಡ್ಸ್ ನಿಯಂತ್ರಣ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೆಚ್.ಐ.ವಿ./ಏಡ್ಸ್ ಅರಿವಿನ ಕೊರತೆಯಿಂದ ಯುವಕರಲ್ಲಿ ರೋಗ ಹೆಚ್ಚಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರಿಗೆ ಹೆರಿಗೆಯಾಗುವುದನ್ನು ಕಾಣುತ್ತಿದ್ದೇವೆ. ಮಕ್ಕಳಲ್ಲಿ ಪ್ರಾಥಮಿಕ ಹಂತದಿ0ದಲೇ ಲೈಂಗಿಕ ಶಿಕ್ಷಣದ ಕೊರತೆ ಕಂಡು ಬ0ದಿರುತ್ತಿದೆ. ಹೆಚ್.ಐ.ವಿ ಹರಡುವ ಮಾರ್ಗಗಳ ಬಗ್ಗೆ ಎಲ್ಲಾ ಯುವಕರು ತಿಳಿದುಕೊಂಡು ಇತರರಿಗೂ ಜಾಗೃತಿ ಮೂಡಿಸಿ ಏಡ್ಸ್ ಮುಕ್ತ ಕೊಪ್ಪಳ ಜಿಲ್ಲೆ ಮಾಡಲು ಜಾಗೃತಿ ಮೂಡಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಶಶಿಧರ್ ಎ. ಅವರು ಮಾತನಾಡಿ, ಜಿಲ್ಲೆಯಲ್ಲಿ ಹೆಚ್.ಐ.ವಿ./ಏಡ್ಸ್ ನಿಯಂತ್ರಣದ ಸ್ಥಿತಿಗತಿ ಕುರಿತು ತಿಳಿಸಿದರು. 14 ಐ.ಸಿ.ಟಿ.ಸಿ ಕೇಂದ್ರಗಳು, 2 ಎಆರ್‌ಟಿ ಕೇಂದ್ರಗಳು ಕೆಲಸ ನಿರ್ವಹಿಸುತ್ತಿದ್ದು, ಎಲ್ಲಾ ಕೇಂದ್ರಗಳಲ್ಲಿ ಆಪ್ತ ಸಮಾಲೋಚಕರು ಹಾಗೂ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳು ಈ ಕಾಯಿಲೆ ಬಗ್ಗೆ ನಿರಂತರವಾಗಿ ಅರಿವು ಮೂಡಿಸುವುದರ ಜೊತೆಗೆ ಅನುಸರಣೆ ಮಾಡುತ್ತಿದ್ದರೆ ಏಡ್ಸ್ ರೋಗ ತಡೆಗಟ್ಟಲು ಜಿಲ್ಲೆಯಲ್ಲಿ
ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಂಡು ಅರಿವು ಮೂಡಿಸಲಾಗುತ್ತದೆ. ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ, ಬೈಕ್ ರ‍್ಯಾಲಿ, ಕಾಲೇಜು ವಿದ್ಯಾರ್ಥಿಗಳಿಗೆ ಪೋಸ್ಟರ್ ಮೇಕಿಂಗ್, ಮ್ಯಾರಾಥಾನ್, ಫ್ಲಾಶ್ ಮೋಬ್ ಹಾಗೂ ಗ್ರಾಮಸಭೆಗಳಲ್ಲಿ ಮುಂತಾದ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತದೆ. 2017 ಏಡ್ಸ್ ನಿಯಂತ್ರಣ ತಡೆಗಟ್ಟುವ ಕಾಯ್ದೆ ಪ್ರಕಾರ ಎಚ್.ಐ.ವಿ ರೋಗಿಗಳಿಗೆ ಸರ್ಕಾರ ಯಾವುದೇ ಸೌಲಭ್ಯ ನೀಡುವಲ್ಲಿ ತಾರತಮ್ಯ ಮಾಡಬಾರದು. ಒಂದು ವೇಳೆ ತಾರತಮ್ಯ ಮಾಡಿದರೆ ಕಾನೂನು ಪ್ರಕಾರ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿಸಿದರು. ನಂತರ ರಾಜ್ಯ ಮಟ್ಟದ ವಿಶ್ವ ಏಡ್ಸ್ ದಿನದ ಕಾರ್ಯಕ್ರಮವು ಮೈಸೂರಿನಲ್ಲಿ ನಡೆಯುತ್ತಿದ್ದು, ಕೊಪ್ಪಳ ಜಿಲ್ಲೆಯ ಶ್ರೀ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಾವಿದ್ಯಾಲಯ, ಕೊಪ್ಪಳ ಕಾಲೇಜು ಉತ್ತಮ ಆರ್.ಆರ್.ಸಿ. ಕಾಲೇಜು ಎಂದು ಆಯ್ಕೆಯಾಗಿರುವುದಕ್ಕೆ ಅಭಿನಂದನೆಗಳನ್ನು ತಿಳಿಸಿದರು.
ಶ್ರೀ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಚನ್ನಬಸವ ಸಾವರಕರ್ ಅವರು ಮಾತನಾಡಿ, ಯುವಕರು ಹಾಗೂ ಯುವತಿಯರು ಹೆಚ್.ಐ.ವಿ./ಏಡ್ಸ್ ತಡೆಗಟ್ಟುವಲ್ಲಿ ಪ್ರಮುಖಪಾತ್ರ ವಹಿಸಬೇಕೆಂದು ತಿಳಿಸಿದರು.
ಹೆಚ್.ಐ.ವಿ./ಏಡ್ಸ್ ತಡೆಗಟ್ಟುವ ಕಾರ್ಯದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ವೈದ್ಯರು, ಅಧಿಕಾರಿ, ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಯಿತು.
ನಂತರ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಎನ್.ಎಸ್.ಎಸ್. ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ ಜಾಥಾದಲ್ಲಿ ಪಾಲ್ಗೊಂಡಿದ್ದರು.
ವಿಶ್ವ ಏಡ್ಸ್ ದಿನದ ಅಂಗವಾಗಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಕೊಪ್ಪಳ ಇವರಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ನಡೆಸಿದ್ದು, ಶಿಬಿರದಲ್ಲಿ 7 ರಕ್ತದ ಯೂನಿಟ್‌ಗಳ ಸಂಗ್ರಹಣೆಯಾಗಿರುತ್ತದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಪ್ರಕಾಶ, ಕಿಮ್ಸ್ನ ಹೆರಿಗೆ ಮತು ರೋಗ ವಿಭಾಗದ ಮುಖ್ಯಸ್ಥರು ಹಾಗೂ ತಜ್ಞ ರಾಜೇಂದ್ರ ಯಾವಗಲ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಕೊಪ್ಪಳದ ನಿರ್ದೇಶಕ ಡಾ.ನಾಗರಾಜ ದಂಡೋತಿ, ಯೂಥ್ ರೆಡ್‌ಕ್ರಾಸ್ ಘಟಕದ ಸಂಯೋಜಕ ಡಾ. ಶರಣಪ್ಪ, ಎನ್.ಎಸ್.ಎಸ್. ಅಧಿಕಾರಿಗಳು ಘಟಕ-1 ರ ಡಾ.ಶರಣಪ್ಪ ಚವ್ಹಾಣ, ಎನ್.ಎಸ್.ಎಸ್. ಅಧಿಕಾರಿಗಳು ಘಟಕ-2 ರ ದಯಾನಂದ ಸಾಳುಂಕೆ, ಎನ್‌ಎಸ್‌ಎಸ್ ಮತ್ತು ಎನ್‌ಸಿಸಿ ಅಧಿಕಾರಿಗಳು, ಸಹ ಉಪನ್ಯಾಸಕರು, ಗವಿಸಿದ್ದೇಶ್ವರ ಶಿಕ್ಷಣ ಸಂಸ್ಥೆ, ಡಿ.ಹೆಚ್.ಇ.ಒ. ಶಿವಾನಂದ, ಬಿ.ಹೆಚ್.ಇ.ಓ. ಗಂಗಮ್ಮ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಿಬ್ಬಂದಿಗಳು ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಸಿಬ್ಬಂದಿ, ವಿದ್ಯಾರ್ಥಿಗಳು, ಸರ್ಕಾರೇತರ ಸಂಘ ಸಂಸ್ಥೆ ಸಿಬ್ಬಂದಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್