
ಹುಬ್ಬಳ್ಳಿ, 01 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ ಉಣಕಲ್ಲನಲ್ಲಿರುವ ಮನೋವಿಕಲ ಬಾಲಕಿಯರ ಸರ್ಕಾರಿ ಬಾಲಮಂದಿರ ಹಾಗೂ ಮಂದಮತಿ ಮಹಿಳೆಯರ ಅನುಪಾಲನ ಗೃಹಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಭೇಟಿ ನೀಡಿ ಪರಿಶೀಲಿಸಿದರು.
ಕಟ್ಟಡ ದುರಸ್ತಿಯ ಕುರಿತು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದರು. ಮಹಿಳೆಯರ ಕೊಠಡಿಗೆ ಭೇಟಿ ನೀಡಿ ಅವರ ದಿನಚರಿಯ ಕುರಿತು ಪರಿಶೀಲಿಸಿ, ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತಿಕಾ ವರ್ಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್. ಕುಕನೂರ, ಜಿಲ್ಲಾ ವಿಕಲಚೇತನ ಕಲ್ಯಾಣ ಅಧಿಕಾರಿ ಸವಿತಾ ಕಾಳೆ, ಜಿಲ್ಲಾ ಯೋಜನಾಧಿಕಾರಿ ದೀಪಕ್ ಮಡಿವಾಳರ, ಜಿಲ್ಲಾ ವಿಕಲಚೇತನ ಕಲ್ಯಾಣ ಕಚೇರಿ ಯೋಜನಾ ಸಹಾಯಕ ಆಕಾಶ ಮಾಳಗೆ, ತಾಲೂಕು ಪಂಚಾಯತಿಯ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಸದಾನಂದ ಅಮರಾಪುರ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಇತರರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa