ತೋಟಗಾರಿಕೆ ಚಟುವಟಿಕೆ ಕೈಗೊಳ್ಳಲು ರೈತರಿಂದ ಅರ್ಜಿ ಆಹ್ವಾನ
ಹೊಸಪೇಟೆ, 10 ಡಿಸೆಂಬರ್ (ಹಿ.ಸ.) : ಆ್ಯಂಕರ್ : 2026-27ನೇ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಪಂಚಾಯಿತಿವಾರು ಕೂಲಿ ಕಾರ್ಮಿರಿಗೆ ತೋಟಗಾರಿಕೆ ಚಟುವಟಿಕೆಗಳನ್ನು ಪ್ರಾರಂಭಿಸಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೊಟಗಾರಿಕೆ ಇಲಾಖೆಯ ಹಿರಿಯ ಸ
ತೋಟಗಾರಿಕೆ ಚಟುವಟಿಕೆ ಕೈಗೊಳ್ಳಲು ರೈತರಿಂದ ಅರ್ಜಿ ಆಹ್ವಾನ


ಹೊಸಪೇಟೆ, 10 ಡಿಸೆಂಬರ್ (ಹಿ.ಸ.) :

ಆ್ಯಂಕರ್ : 2026-27ನೇ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಪಂಚಾಯಿತಿವಾರು ಕೂಲಿ ಕಾರ್ಮಿರಿಗೆ ತೋಟಗಾರಿಕೆ ಚಟುವಟಿಕೆಗಳನ್ನು ಪ್ರಾರಂಭಿಸಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೊಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಎಮ್.ರಮೇಶ ತಿಳಿಸಿದ್ದಾರೆ.

ತೋಟಗಾರಿಕೆ ಚಟುವಟಿಕೆಗಳಲ್ಲಿ ಹೊಸ ಪ್ರದೇಶ ವಿಸ್ತರಣೆಗೆ ಬಹುವಾರ್ಷಿಕ ಪ್ರಮುಖ ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ಡ್ರಾಗನ್ ಹಣ್ಣು, ನುಗ್ಗೆ, ತೆಂಗು, ಸೀಬೆ, ಅಂಜೂರು, ನಿಂಬೆ, ಮಾವು, ಸಪೆÇೀಟ, ವಿಳ್ಯದೆಲೆ, ನೆರಳೆ, ಬಾರೆ, ಗುಲಾಬಿ, ಮಲ್ಲಿಗೆ ಹಾಗೂ ಹಲಸು ಈ ಎಲ್ಲಾ ಬೆಳೆಗಳಿಗೆ ಆಸಕ್ತ ರೈತರು ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ನೀಡಬೇಕಾದ ದಾಖಲಾತಿಗಳು : ಮನರೇಗಾ ಯೋಜನೆಯ ಉದ್ಯೋಗ ಚೀಟಿ, ಪಹಣಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಇತರೆ ರೈತರು ಬಿಪಿಎಲ್ ಕಾರ್ಡ್ ಅಥವಾ ಹಿಡುವಳಿದಾರರ ಪ್ರಮಾಣ ಪತ್ರ ಸಂಬಂಧಿತ ದಾಖಲೆಗಳನ್ನು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು ಕಚೇರಿ(ಜಿಪಂ) ಹೊಸಪೇಟೆ ಅಥವಾ ರೈತರು ಆಯಾ ಗ್ರಾಮ ಪಂಚಾಯಿತಿಯಲ್ಲಿ ತಮ್ಮ ಹೆಸರು ನೋಂದಾಯಿಸಿ ಅರ್ಜಿ ಸಲ್ಲಿಸಬುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿಯ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಾದ, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಹೊಸಪೇಟೆ ಮೊ.9164297220, ಮರಿಯಮ್ಮನಹಳ್ಳಿ ಮೊ.7204888978, ಕಮಲಾಪುರ ಮೊ.8123465548, ಹೊಸಪೇಟೆ ಸಹಾಯಕ ತೋಟಗಾರಿಕೆ ನಿರ್ದೇಶಕ ಮೊ.9901555690 ಹೊಸಪೇಟೆ ತಾಂತ್ರಿಕ ಸಹಾಯಕರು ಮೊ.9900836164 ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮೊ.8310291867 ಈ ಸಂಖ್ಯೆಗಳಿಗೆ ಕರೆ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande