
ವಿಜಯಪುರ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳು ಮತ್ತು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳೆಯರೂ ಸೇರಿದಂತೆ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿದಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು,ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08352-295353 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande