
ಬೆಳಗಾವಿ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಗ್ಯಾರಂಟಿ ಯೋಜನೆಗಳ ಬಗ್ಗೆ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು ಮನವಿ ಮಾಡಿದರೆ ಎಂಬ ಪ್ರಶ್ನೆಗೆ ಉತ್ತರಿಸ ಗ್ಯಾರಂಟಿಗಳ ಬಗ್ಗೆ ಸಿ ಎಲ್. ಪಿ ಸಭೆಯಲ್ಲಿ ಚರ್ಚೆಯೇ ಆಗಲಿಲ್ಲ ಎಂದರು.
ಇನ್ನೂ ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿದ್ದ ಎಸ್ ಐ ಟಿ ದೋಷಾರೋಪ ಪಟ್ಟಿಯಲ್ಲಿ ಷಡ್ಯಂತರವಾಗಿದೆ ಎಂದು ಉಲ್ಲೇಖವಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಚಾರ್ಚ್ ಶೀಟ್ ನ್ನು ಇನ್ನೂ ನೋಡಿಲ್ಲ ಎಂದರು.
ಇದೇ ವೇಳೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯುವರೆ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು ಸೂಚನೆಯೇ ಅಂತಿಮ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa