ತಳವಾರ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಬೇಡಿಕೆ ಪರಿಶೀಲನೆ : ಮುಖ್ಯಮಂತ್ರಿ
ಬೆಳಗಾವಿ, 10 ಡಿಸೆಂಬರ್ (ಹಿ.ಸ.) : ಆ್ಯಂಕರ್ : ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿಸುವ ಕುರಿತ ಬೇಡಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ಸಂಬಂಧಿತ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವರವಾದ ವರದಿ ಪಡೆ
Meeting


ಬೆಳಗಾವಿ, 10 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿಸುವ ಕುರಿತ ಬೇಡಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ಸಂಬಂಧಿತ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವರವಾದ ವರದಿ ಪಡೆದರು.

ಸಭೆಯಲ್ಲಿ ಬೇಡಿಕೆಯ ಹಿನ್ನೆಲೆ, ಲಭ್ಯವಿರುವ ಸಾಮಾಜಿಕ–ಆರ್ಥಿಕ ಅಧ್ಯಯನಗಳು, ಕಾನೂನುಬದ್ಧ ಪ್ರಕ್ರಿಯೆ, ಮತ್ತು ಮುಂದಿನ ಹಂತಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳು ಪ್ರಸ್ತುತಪಡಿಸಿದರು. ಸಮುದಾಯದ ಪ್ರತಿನಿಧಿಗಳಿಂದ ಬಂದ ಮನವಿಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿ ಕುಮಾರ್, ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್, ಶಾಸಕರಾದ ಅಲ್ಲಮ ಪ್ರಭು ಪಾಟೀಲ್ ಮತ್ತು ತಿಪ್ಪಣ್ಣಪ್ಪ ಕಮಕನೂರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande