
ವಿಜಯಪುರ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ವಿವಿಧ ಕಚೇರಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬಬಲೇಶ್ವರದಲ್ಲಿನ ಇಂದಿರಾ ಕ್ಯಾಂಟಿನ್ ಗೆ ಭೇಟಿ ನೀಡಿ, ಅಡುಗೆ ಕೋಣೆ ಪರಿಶೀಲಿಸಿ, ಆಹಾರದ ಗುಣಮಟ್ಟ ಶುಚಿತ್ವ ಮತ್ತು ಸ್ವಚ್ಛತೆಗೆ, ಶುದ್ಧ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು ಎಂದು ಹೇಳಿದ ಅವರು, ಮೆನು ಪ್ರಕಾರ ಆಹಾರ ಒದಗಿಸಬೇಕು. ಉತ್ತಮ ಶುಚಿ ರುಚಿಯಾದ ಆಹಾರ ನೀಡಬೇಕು. ಅಲ್ಲಿನ ಜನರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು ಆಹಾರದ ಗುಣಮಟ್ಟದ ಕುರಿತು ಮಾಹಿತಿ ಪಡೆದುಕೊಂಡರು.
ಸರ್ಕಾರದ ಶಾಲೆಯೊಂದಕ್ಕೆ ಭೇಟಿ ನೀಡಿ, ವಿದ್ಯಾರ್ಥಿಳೊಂದಿಗೆ ಸಂವಾದ ನಡೆಸಿದರು. ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ವಿದ್ಯಾರ್ಥಿ - ಶಿಕ್ಷಕರ ಹಾಜರಾತಿ ಪರಿಶೀಲಿಸಿದ ಅವರು ಕಲಿಕೆ ಗುಣಮಟ್ಟಕ್ಕೆ ಆದ್ಯತೆ ನೀಡಬೆಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ತಹಶೀಲ್ದಾರರಾದ ಶಾಂತಲಾ ಚಂದನ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande