
ಕೊಪ್ಪಳ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ. ನಾಗರಾಜ ದಂಡೋತಿ ಅವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ನೀಡುವ 2023-24ನೇ ಸಾಲಿನ ಉತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ ಲಭಿಸಿದೆ.
ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ಬಿಎ ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಶಶಿಕುಮಾರ ಉಳ್ಳಾಗಡ್ಡಿ ಹಾಗೂ ಮುತ್ತಣ್ಣ ಅವರಿಗೂ ಕೂಡ ಉತ್ತಮ ಎನ್.ಎಸ್.ಎಸ್ ಸ್ವಯಂ ಸೇವಕ ಪ್ರಶಸ್ತಿಗಳು ಲಭಿಸಿವೆ. ಡಿಸೆಂಬರ್ 17ರಂದು ವಿಶ್ವವಿದ್ಯಾಲಯದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್