ಮುಖಾಮುಖಿ ಲಾರಿ ಡಿಕ್ಕಿ ; ಸ್ಥಳದಲ್ಲೇ ಮೂವರ ಸಾವು
ವಿಜಯಪುರ, 10 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಂಟನೂರು ಕ್ರಾಸ್ ಬಳಿ ಭೀಕರ ರಸ್ತೆ ದುರ್ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ಸಿಮೆಂಟ್ ಸಾಗಿಸುತ್ತಿದ್ದ ಬಲ್ಕರ್ ಗಾಡಿ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಗಾಡಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಡಿಯ
ಅಪಘಾತ


ವಿಜಯಪುರ, 10 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಂಟನೂರು ಕ್ರಾಸ್ ಬಳಿ ಭೀಕರ ರಸ್ತೆ ದುರ್ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ಸಿಮೆಂಟ್ ಸಾಗಿಸುತ್ತಿದ್ದ ಬಲ್ಕರ್ ಗಾಡಿ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಗಾಡಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಡಿಯ ಒಳಗೆ ಸಿಕ್ಕಿಕೊಂಡಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ.

ಘಟನಾ ಸ್ಥಳಕ್ಕೆ ಎಸ್ಪಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಜೆಸಿಬಿ ಸಹಾಯದಿಂದ ಗಾಡಿಯಲ್ಲಿ ಸಿಕ್ಕಿಕೊಂಡವರನ್ನು ಹೊರತೆಗೆದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಡಿಕ್ಕಿ ಹೊಡೆತಕ್ಕೆ ಚಾಲಕನ ಅಜಾಗ್ರತೆ ಕಾರಣ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಹರಸಾಹಸ ಅನುಭವಿಸಿದರು. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande