
ಧಾರವಾಡ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವ್ಯಕ್ತಿಯ ಘನತೆಯ ಬದುಕನ್ನು ಕಾಪಾಡುವುದು ಮತ್ತು ಎಲ್ಲರನ್ನು ಸಮಾನವಾಗಿ ಕಾಣುವ ಸಮಾಜ ನಿರ್ಮಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 1948ರಲ್ಲಿ ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಅಂಗೀಕರಿಸಿದ ದಿನವಾಗಿರುವ ಡಿಸೆಂಬರ್ 10ರ ಮಹತ್ವವನ್ನು ಅವರು ಸ್ಮರಿಸಿದರು.
ಸಾಮಾಜಿಕವಾಗಿ ಹೆಣ್ಣು ಮಕ್ಕಳು ನಿರ್ಭಯವಾಗಿ ಬದುಕಲು ಸೂಕ್ತ ಪರಿಸರ ನಿರ್ಮಿಸುವುದು, ನಾಗರಿಕರ ಹಕ್ಕುಗಳಿಗೆ ಧಕ್ಕೆ ತರುವ ಘಟನೆಗಳನ್ನು ತಪ್ಪಿಸುವುದು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದು ಆಡಳಿತದ ಆದ್ಯತೆಯಾಗಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ನೇತೃತ್ವದಲ್ಲಿ ಅಧಿಕಾರಿಗಳು ಮಾನವ ಹಕ್ಕು ಸಂರಕ್ಷಣೆಗೆ ಪ್ರತಿಜ್ಞೆ ಸ್ವೀಕರಿಸಿದರು.
ಜಿಲ್ಲಾ ಪಂಚಾಯತ್ ಸಿಇಓ ಭುವನೇಶ ಪಾಟೀಲ, ನ್ಯಾಯಾಧೀಶ ಪರಶುರಾಮ ಎಫ್. ದೊಡಮನಿ ಹಾಗೂ ಹಲವಾರು ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa