
ಗದಗ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗದಗ ತಾಲೂಕು ಅಗ್ರಸ್ಥಾನ ಪಡೆದಿದ್ದರೂ, ಗೃಹಲಕ್ಷ್ಮೀ ಯೋಜನೆಯ ಪ್ರಗತಿ ಇನ್ನೂ ಹೆಚ್ಚಿಸಬೇಕಿದೆ ಎಂಬುದಾಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ಹೇಳಿದರು.
ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಸಮಿತಿ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ನಂತರ ಮಾತನಾಡಿ ಯೋಜನೆಯ ಶೇಕಡಾ 100 ಪ್ರಗತಿ ಸಾಧನೆಗೆ ಎಲ್ಲ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವವಾಗಿದೆ ಎಂದರು, ಪ್ರತಿ ವಾರ್ಡಗಳಲ್ಲಿ ನಗರಸಭೆಯ ಸದಸ್ಯರು, ಅಧಿಕಾರಿಗಳು, ಮತ್ತು ಸಮಿತಿ ಸದಸ್ಯರ, ಸಹಕಾರದೊಂದಿಗೆ ನಗರದ 1 ರಿಂದ 35 ವಾಡಗಳಲ್ಲಿ ಯೋಜನೆಯ ಸೌಲಭ್ಯದಿಂದ ಯಾರೂ ವಂಚಿತರಾಗಬಾರದು ಮತ್ತು ವಂಚಿತರಾದವರನ್ನು ಗುರುತಿಸಿ ಮಾಹಿತಿ ಕೊಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಿದರು.
ರಾಜ್ಯದಲ್ಲಿಯೇ ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ಗದಗ ತಾಲೂಕು ಅಗ್ರಸ್ಥಾನ ಪಡೆದಿದ್ದು ಇದಕ್ಕೆ ಕಾರಣೀಕರ್ತರಾದ ರಾಜ್ಯ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರ ಮಾರ್ಗದರ್ಶದಲ್ಲಿ ಪ್ರಗತಿ ಸಾಧಿಸಿದ್ದು ಅಭಿನಂದನಾರ್ಹವಾಗಿದೆ ಎಂದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಸಮಿತಿ ಸದಸ್ಯರಾದ ಕೃಷ್ಣಗೌಡ ಪಾಟೀಲ ಇವರು ಮಾತನಾಡಿ ಪಂಚಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲೀಕರಿಸುವ ಉದ್ದೇಶ ಹೊಂದಿವೆ ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯುವಲ್ಲಿ ವಿಳಂಬ ಆಗಬಾರದು ಪ್ರತಿ ವಾರ್ಡಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ಬೇಟಿ ನೀಡಿ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಶೇಕಡಾ 100 ಪ್ರಗತಿ ಸಾಧಿಸಲು ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸಬೇಕು ಹಾಗೂ ಪ್ರತಿ ವಾರ್ಡಗಳಲ್ಲಿ ಕ್ಯಾಂಪೇನ್ ಮಾಡುವ ಮೂಲಕ ಸೌಲಬ್ಯ ವಂಚಿತರನ್ನು ಮತ್ತು ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಲು ಮುಂದಾಗಬೇಕೆಂದರು.
ಅರ್ಹರಿಗೆ ಸೌಲಭ್ಯ ತಲುಪಿಸುವುದು ಗೃಹಲಕ್ಷಿ÷ ಯೋಜನೆಯಡಿ ಜುಲೈ 2025 ರವರೆಗೆ ಗದಗ ತಾಲೂಕಿನಲ್ಲಿ ಯಜಮಾನಿ ಹೆಸರಿನಲ್ಲಿ ಒಟ್ಟು 82193 ಜನರು ಪಡಿತರ ಹೊಂದಿರುತ್ತಾರೆ. 81967 ಅರ್ಜಿಗಳು ನೊಂದಣಿಯಾಗಿದ್ದು ಅದರಲ್ಲಿ 78986 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ಶೇ 96.36 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಗಳು, ಅಂಗನವಾಡಿ ಕಾರ್ಯೆಕರ್ತೆಯರು, ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP