

ಬಳ್ಳಾರಿ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಡಿಸೆಬರ್ 13 ರ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.
ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೊದಲನೇ ಮಹಡಿಯ ವಿಡೀಯೋ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಬಳ್ಳಾರಿ ಜಿಲ್ಲೆಯಲ್ಲಿ ಅದಾಲತ್ ದಿನದಂದು 15 ಬೆಂಚ್ ಗಳಲ್ಲಿ ಅದಾಲತ್ ನಡೆಯಲಿದೆ. ಬಗೆಹರಿಸಬಹುದಾದ ವಿವಿಧ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಹಾಗೂ ನ್ಯಾಯಾಲಯದ ಶುಲ್ಕವನ್ನು ಮರು ಪಾವತಿಸಲಾಗುತ್ತದೆ ಎಂದು ಹೇಳಿದರು.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 35,533 ಬಾಕಿ ಪ್ರಕರಣಗಳಲ್ಲಿ ಡಿಸೆಂಬರ್ 13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 8,961 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಗುರುತಿಸಲಾಗಿದೆ. ಈ ಪೈಇ 4,178 ಪ್ರಕರಣಗಳ ಉಭಯ ಕಕ್ಷಿದಾರರು ರಾಜಿ ಮಾತುಕತೆಯ ಮೂಲಕ ಇತ್ಯರ್ಥಕ್ಕೆ ಒಪ್ಪಿಕೊಂಡಿದ್ದಾರೆ ಎಂದರು.
ರಾಜ್ಯ ಸರ್ಕಾರವು ಪೆÇಲೀಸ್ ಇಲಾಖೆಯ ಪೆÇಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿದ್ದು, ಡಿ.12 ರ ವರೆಗೆ ಈ ರಿಯಾಯಿತಿ ಸೌಲಭ್ಯವು ಇರಲಿದೆ. ಡಿಸೆಂಬರ್ 13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್ ಪ್ರಯುಕ್ತ ಈ ರಿಯಾಯಿತಿ ನೀಡಲಾಗಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್