ರಾಯಚೂರು : ಮಾನವ ಹಕ್ಕುಗಳ ಪ್ರತಿಜ್ಞಾವಿಧಿ
ರಾಯಚೂರು, 10 ಡಿಸೆಂಬರ್ (ಹಿ.ಸ.) : ಆ್ಯಂಕರ್ : ನೂತನ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಡಿಸೆಂಬರ್ 10ರಂದು ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮಗಳು ನಡೆದವು. ದಿನಾಚರಣೆ ನಿಮಿತ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಜ್ಞಾವಿದಿ ಸ್ವೀಕರಿಸಿದರು. ಜಿಲ್ಲಾಧಿಕಾರಿಗಳ ಕಚ
ರಾಯಚೂರು:  ಮಾನವ ಹಕ್ಕುಗಳ ಪ್ರತಿಜ್ಞಾವಿಧಿ


ರಾಯಚೂರು:  ಮಾನವ ಹಕ್ಕುಗಳ ಪ್ರತಿಜ್ಞಾವಿಧಿ


ರಾಯಚೂರು:  ಮಾನವ ಹಕ್ಕುಗಳ ಪ್ರತಿಜ್ಞಾವಿಧಿ


ರಾಯಚೂರು:  ಮಾನವ ಹಕ್ಕುಗಳ ಪ್ರತಿಜ್ಞಾವಿಧಿ


ರಾಯಚೂರು, 10 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ನೂತನ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಡಿಸೆಂಬರ್ 10ರಂದು ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮಗಳು ನಡೆದವು. ದಿನಾಚರಣೆ ನಿಮಿತ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಜ್ಞಾವಿದಿ ಸ್ವೀಕರಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಶಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ನಗರದ ಡಿಡಿಪಿಐ ಕಚೇರಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಆಜಾದ ನಗರದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ಜಿಲ್ಲಾ ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮ ನಡೆಯಿತು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಉಪ ನಿರ್ದೇಶಕರಾದ ಸೋಮಶೇಖರಪ್ಪ ಹೊಕ್ರಾಣಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ನಗರದ ತೋಟಗಾರಿಕೆ ಇಲಾಖೆಯ ಕಚೇರಿಯಲ್ಲಿ ಉಪ ನಿರ್ದೇಶಕರಾದ ಅಮಹದ್ ಅಲಿ ಅವರ ನೇತೃತ್ವದಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande