
ರಾಯಚೂರು, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ರಾಯಚೂರು ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಗಾಗಿ ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದ0ದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ರಾಯಚೂರು ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸಬೇಕು. ಅಭ್ಯರ್ಥಿಗಳು ಸ್ನಾತ್ತಕೋತ್ತರ ಅಂತಿಮ ವರ್ಷದ ಪದವಿಯ ಅಂಕಪಟ್ಟಿಯೊ0ದಿಗೆ ಅರ್ಜಿಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂ. (ಹದಿನೈದು ಸಾವಿರ ರೂಪಾಯಿಗಳು ಮಾತ್ರ) ಗಳ ಸ್ಟೈ ಫಂಡ್ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಬೆಳ್ಳಿಗೆ 10 ರಿಂದ ಸಂಜೆ 5.30 ರವರೆಗೆ ಇರುತ್ತದೆ. ಈ ತರಬೇತಿಯು 2026ರ ಕ್ಯಾಲೆಂಡರ್ ಅವಧಿಯ ಜನವರಿ-2026ರ ಮಾಹೆಯಿಂದ ಪ್ರಾರಂಭಗೊ0ಡು ಡಿಸೆಂಬರ್-2026ಕ್ಕೆ ಕೊನೆಗೊಳ್ಳಲಿದೆ. ಈ ತರಬೇತಿಯು 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸುವ0ತೆ ಒತ್ತಡ ತರುವಂತಿಲ್ಲ ಹಾಗೂ ತರಬೇತಿಯ ಅವಧಿಯಲ್ಲಿ ಬೇರೆ ಉದ್ಯೋಗ ಮಾಡಬಾರದು.
ತರಬೇತಿ ಅವಧಿಯ ಮಧ್ಯೆದಲ್ಲಿ ಬಿಟ್ಟು ಹೋದರೆ ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದುರುಗಿಸುವುದಿಲ್ಲ. ಸರ್ಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಖಾಯಂ ಉದ್ಯೋಗ ಸಿಕ್ಕಿದಲ್ಲಿ ಷರತ್ತಿಗೊಳಪಟ್ಟು ಮೂಲ ದಾಖಲಾತಿಗಳನ್ನು ಹಿಂದಿರುಗಿಸಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಈ ಎಲ್ಲಾ ಷರತ್ತುಗಳನ್ನು ಪಾಲಿಸುವುದಾಗಿ ಆಯ್ಕೆಯಾದ ಅಭ್ಯರ್ಥಿಗಳಿಂದ 20 ರೂ. (ಇಪ್ಪತ್ತು ರೂಪಾಯಿ ಮಾತ್ರ) ಗಳ ಛಾಪ ಕಾಗದದಲ್ಲಿ ಲಿಖಿತ ಹೇಳಿಕೆ ಪಡೆಯಲಾಗುವುದು.
ಆಸಕ್ತರು, ಅರ್ಜಿಯನ್ನು ಡಿಸೆಂಬರ್ 26ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪತ್ರಿಕಾ ಭವನದ ಮೇಲಮಹಡಿ, ಜಿಲ್ಲಾ ರಂಗಮAದಿರದ ಹಿಂದೆ, ರಾಯಚೂರು ಜಿಲ್ಲೆ, ರಾಯಚೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.9008462236 ಅಥವಾ ಮೊ.9743892080ಗೆ ಸಂಪರ್ಕಿಸುವ0ತೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್