ನೀರಾವರಿ ಯೋಜನೆಗಳ ವೇಗವರ್ಧನೆಗೆ ಮುಖ್ಯಮಂತ್ರಿ ಸೂಚನೆ
ಬೆಳಗಾವಿ, 10 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತು ಸುವರ್ಣಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮುಖ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಕಾಗವಾಡ ತಾಲೂಕಿನ ಬರಪೀಡಿತ ಗ್ರಾಮಗಳಿಗೆ ನೀ
Meeting


ಬೆಳಗಾವಿ, 10 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತು ಸುವರ್ಣಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮುಖ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಕಾಗವಾಡ ತಾಲೂಕಿನ ಬರಪೀಡಿತ ಗ್ರಾಮಗಳಿಗೆ ನೀರು ಒದಗಿಸುವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆ ಕುರಿತು ವಿವರವಾಗಿ ಚರ್ಚಿಸಿದರು.

2017ರಲ್ಲಿ ಪ್ರಾರಂಭಗೊಂಡ ಈ ಯೋಜನೆಗೆ ಈಗಾಗಲೇ ರೂ. 1,158 ಕೋಟಿ ವೆಚ್ಚವಾಗಿದ್ದು, 90% ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾರ್ಯವನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಯೋಜನೆಗಾಗಿ ಅಗತ್ಯವಾದ 652 ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ರೈತರ ಹೊಲಗಳಿಗೆ ನೀರು ಹರಿಸಲು ಬೇಕಾದಷ್ಟು ಅನುದಾನವನ್ನು ಸರ್ಕಾರ ಒದಗಿಸುತ್ತದೆ ಎಂದು ಅವರು ಭರವಸೆ ನೀಡಿದರು.

ಸಾಲಾಪುರ ಏತ ನೀರಾವರಿ ಯೋಜನೆ ಕುರಿತಾಗಿ, ರಾಮದುರ್ಗ, ಮುಧೋಳ ಮತ್ತು ಬಾದಾಮಿ ತಾಲೂಕಿನ ಒಟ್ಟು 22 ಬರಪೀಡಿತ ಗ್ರಾಮಗಳಿಗೆ ನೀರು ಪೂರೈಸುವ ಈ ಯೋಜನೆಯಲ್ಲಿ 80% ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಕಾರ್ಯಗಳಿಗೆ ಕೂಡ ಶೀಘ್ರ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದರು.

ಅದೇ ರೀತಿಯಲ್ಲಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ 34 ಬರಪೀಡಿತ ಗ್ರಾಮಗಳಿಗೆ ನೀರು ಒದಗಿಸುವ ವೀರಭದ್ರೇಶ್ವರ ಏತ ನೀರಾವರಿ ಯೋಜನೆಯನ್ನೂ ಆದ್ಯತೆಯಿಂದ ಪೂರ್ಣಗೊಳಿಸಲು ಸಂಬಂಧಿತ ಇಲಾಖೆಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande