
ಕೋಲಾರ, ೧೦ ಡಿಸೆಂಬರ್(ಹಿ.ಸ) :
ಆ್ಯಂಕರ್ : ಬೀದಿ ಬದಿ ವ್ಯಾಪಾರಿಗಳು ಪ್ರತಿದಿನ ಹಗಲೆನ್ನದೆ ಬಿಸಿಲೆನ್ನದೆ ರಸ್ತೆ ಬದಿಯಲ್ಲಿ ಎಷ್ಟೇ ಧೂಳು ದುಮ್ಮಿದ್ದರು ಬೇಸರ ಮಾಡಿಕೊಳ್ಳದೆ ಕಷ್ಟ ಪಟ್ಟು ಬೆವರು ಸುರಿಸಿ ದುಡಿಯುತ್ತಾರೆ. ಯಾವುದೇ ಜಾತಿ ಧರ್ಮ ನೋಡದೆ ವ್ಯಾಪಾರ ಮಾಡುತ್ತಾರೆ. ಅವರು ಯಾರ ಮೇಲೆಯು ಅವಲಂಭಿತರಾಗದೆ ಅವರ ಕೆಲಸ ಅವರು ಮಾಡಿಕೊಂಡು ಹೋಗುತ್ತಾರೆ. ಅಂಥವರ ಹೊಟ್ಟೆ ಮೇಲೆ ಒಡೆಯುವ ಕೆಲಸಬೇಡ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯ ಅಧ್ಯಕ್ಷ ಡಾ ಸಿಇ ರಂಗಸ್ವಾಮಿ ಬೇಸರ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಬುಧವಾರದಂದು ಬೆಳಿಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ಸಭೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ರಸ್ತೆ ಬದಿಗಳಲ್ಲಿ ಜನರಿಗೆ ತೊಂದರೆಯಾಗುವ ಕೆಲಸ ಮಾಡಬೇಡಿ. ಪ್ಲಾಸ್ಟಿಕ್ ಬಳಸಿ ಆಹಾರ ತಯಾರಿಸಬೇಡಿ. ಹಣ್ಣುಗಳಿಗೆ ಕಲ್ಲರ್ ಹಾಕಬೇಡಿ ಜನಸಾಮಾನ್ಯರು ತಿಂದರೆ ಅರೋಗ್ಯ ಕೆಡುತ್ತದೆ. ನೀವು ವ್ಯಾಪಾರ ಮಾಡುವ ಸ್ಥಳದಲ್ಲಿ ಅನೇಕ ಅಪಘಾತಗಳು ಆಗುತ್ತಿವೆ ಅಂತಲೆ ಮುಖ್ಯ ರಸ್ತೆಗಳಲ್ಲಿ ನಿಮ್ಮನ್ನ ತೆರವುಗೊಳಿಸಿದ್ದಾರೆ. ವ್ಯಾಪಾರ ಮಾಡುವ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಿ. ಸರ್ಕಾರ ನಿಮ್ಮ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ನೀಡುತ್ತಿದೆ ಅವುಗಳನ್ನ ಸರಿಯಾಗಿ ಸದ್ಭಳಕೆ ಮಾಡಿಕೊಳ್ಳಿ.
ಇಟಿಸಿಎಂ ಪಕ್ಕದಲ್ಲಿನ ರಸ್ತೆಯಲ್ಲಿ ವ್ಯಾಪಾರ ಮಾಡಲು ಫುಡ್ ಕೋಟ್ ಮಾದರಿ ವೆಂಡಿಂಗ್ ವ್ಯವಸ್ಥೆ ಮಾಡುವ ಭರವಸೆ ನಗರಸಭೆ ಆಯುಕ್ತರು ನೀಡಿದ್ದಾರೆ. ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಅರೋಗ್ಯ ಇಲಾಖೆಯವರು ನಗರಸಭೆಯವರು ತುಂಬಾ ಹಿಂಸೆ ನೀಡುತ್ತಿದ್ದಾರೆ ಎಂಬ ಆರೋಪ ನನ್ನ ಗಮನಕ್ಕೆ ಬಂದಿದೆ. ಹಾಗಾಗಿ ಕಾನೂನಿನ ಬಗ್ಗೆ ಅರಿವು ಪಡೆದುಕೊಳ್ಳಿ. ಬೀದಿ ಬದಿ ವ್ಯಪಾರಿಗಳು ಎಲ್ಲಾರು ಒಗ್ಗಟ್ಟಾಗಿ. ಸಂಘಟನೆ ಬಲವಾದಗ ಶಿಕ್ಷಣವಾದಾಗ ಶಕ್ತಿ ತುಂಬಿದಾಗ ಯಾರು ಏನು ಮಾಡಲು ಆಗೋದಿಲ್ಲ. ನಾವು ಸ್ವಯಂ ಉದ್ಯೋಗಸ್ಥರು ಯಾರಿಗೆ ಭಯ ಪಡಬೇಕಾಗಿಲ್ಲ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯ ಮಹಿಳಾ ಅಧ್ಯಕ್ಷರಾದ ಕಾವ್ಯಶ್ರೀ, ಜಿಲ್ಲಾ ಅಧ್ಯಕ್ಷರಾದ ಮಂಜುನಾಥ್ ವಿ, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಸೈಯದ್ ಖಾಸಿಂ, ನಗರಸಭೆ ಅಧ್ಯಕ್ಷೆ ಲಕ್ಷ್ಮಿ ದೇವಮ್ಮ,ಎಸ್ ಸಿ ಎಸ್ ಟಿ ಘಟಕ ಅಧ್ಯಕ್ಷ ಜಯದೇವ,ಲಾಲ್ ಬಹಾದ್ದೂರ್ ಶಾಸ್ತ್ರೀ ಸೇರಿದಂತೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಬೀದಿ ಬದಿ ವ್ಯಾಪಾರಿಗಳು ಇತರರು ಇದ್ದರು.
ಚಿತ್ರ ; ಕೋಲಾರ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ಸಭೆ ಕಾರ್ಯಕ್ರಮ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್