18 ನೇ ರಾಷ್ಟ್ರೀಯ ಸಮ್ಮೇಳನ
ಗದಗ, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಬೆಂಗಳೂರು ಹಾಗೂ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ, ಗದಗ ಇವರ ಸಹಯೋಗದೊಂದಿಗೆ ಗ್ರಾಮೀಣಾಬಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇವರ ಪ್ರಾಯೋಜಕತ್ವದಲ್ಲಿ ಅಖಿಲ ಭಾರತ ಪಂಚಾಯತ್
ಫೋಟೋ


ಗದಗ, 11 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಬೆಂಗಳೂರು ಹಾಗೂ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ, ಗದಗ ಇವರ ಸಹಯೋಗದೊಂದಿಗೆ ಗ್ರಾಮೀಣಾಬಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇವರ ಪ್ರಾಯೋಜಕತ್ವದಲ್ಲಿ ಅಖಿಲ ಭಾರತ ಪಂಚಾಯತ್ ಪರಿಷತ್ ನ 18 ನೇ ರಾಷ್ಟ್ರೀಯ ಸಮ್ಮೇಳನವನ್ನು 13 ಮತ್ತು 14 ನೇ ಡಿಸೆಂಬರ್ 2025 ನಾಗಾವಿಯ ಮ.ಗಾಂ.ಗ್ರಾ. ಮತ್ತು ಪಂ. ರಾಜ್ ವಿಶ್ವವಿದ್ಯಾಲಯದ ಗ್ರಾಮ ಗಂಗೋತ್ರಿ ಆವರಣ ಕೌಶಲ್ಯ ವಿಕಾಸ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಡಿಸೆಂಬರ್ 13 ರಂದು ಬೆಳಿಗ್ಗೆ 10.30 ಗಂಟೆಗೆ ಅಖಿಲ ಭಾರತ ಪಂಚಾಯತ್ ಪರಿಷತ್ ನ 18 ನೇ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನೆಯು ನಾಗಾವಿಯ ಮ.ಗಾಂ.ಗ್ರಾ. ಮತ್ತು ಪಂ. ರಾಜ್ ವಿಶ್ವವಿದ್ಯಾಲಯದ ಗ್ರಾಮ ಗಂಗೋತ್ರಿ ಆವರಣ ಕೌಶಲ್ಯ ವಿಕಾಸ ಭವನದಲ್ಲಿ ಜರುಗಲಿದೆ.

ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸಬಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಐ.ಟಿ. ಮತ್ತು ಬಿಟಿ ಇಲಾಖೆ ಸಚಿವರು ಹಾಗೂ. ಗಾಂ.ಗ್ರಾ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ಸಹ ಕುಲಾಧಿಪತಿ ಪ್ರಿಯಾಂಕ್ ಖರ್ಗೆ ಅವರು ವಿಶ್ವ ವಿದ್ಯಾಲಯದ ಶಾಲಾ ಕಟ್ಟಡವನ್ನು ಉದ್ಘಾಟಿಸುವರು.

ರಾಜ್ಯದ ಕಾನೂನು , ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಶಾಸಕ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, 5 ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಮಾಜಿ ಸಂಸದ ಡಾ.ಸಿ.ನಾರಾಯಣಸ್ವಾಮಿ, ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೆಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ನರಗುಂದ ಶಾಸಕ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ವಿಧಾನಪರಿಷತ್ ಶಾಸಕ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ , ಗದಗ -ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ನಾಗಾವಿ ಗ್ರಾ.ಪಂ.ಅಧ್ಯಕ್ಷ ಉಳವೆಪ್ಪ ಬಿ.ಶಿಗ್ಲಿ , ಕಳಸಾಪುರ ಗ್ರಾ.ಪಂ. ಅಧ್ಯಕ್ಷ ಶ್ರೀಮತಿ ಅನುಸೂಯಾ ಬಿ.ಬೆಟಗೇರಿ, ಅಸುಂಡಿ ಗ್ರಾ.ಪಂ. ಅಧ್ಯಕ್ಷ ಅಲ್ತಾಫ್ ಎ. ಕಾಗದಗಾರ ಆಗಮಿಸುವರು.

ಗೌರವಾನ್ವಿತ ಅತಿಥಿಗಳಾಗಿ ಅಖಿಲ ಭಾರತ ಪಂಚಾಯತ್ ಪರಿಷತ್ ಅಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ಸುಬೋಧ್ ಕಾಂತ್ ಸಹಾಯ್, ಅಖಿಲ ಭಾರತ ಪಂಚಾಯತ್ ಪರಿಷತ್ ಕಾರ್ಯಾಧ್ಯಕ್ಷ ಡಾ.ಅಶೋಕ ಚೌಹಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿವೃತ್ತ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಎಸ್.ಮೀನಾಕ್ಷಿ ಸುಂದರಮ್ ಆಗಮಿಸುವರು.

ವಿಶೇಷ ಆಹ್ವಾನಿತರಾಗಿ ಗ್ರಾ. ಮತ್ತು ಪಂ.ರಾಜ್ ಇಲಾಖೆ ಕಾರ್ಯದರ್ಶಿ ಸಮೀರ್ ಶುಕ್ಲಾ , ಗ್ರಾ. ಮತ್ತು ಪಂ.ರಾಜ್ ಇಲಾಖೆ ಕಾರ್ಯದರ್ಶಿ ರಂದೀಪ್ ಡಿ, ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ , ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಜಾನಕಿ ಕೆ.ಎಂ, ಕ.ಪಂ.ರಾಜ್.ಆಯುಕ್ತಾಲಯದ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ, ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ ಆಗಮಿಸುವರು.

ಮ.ಗಾಂ.ಗ್ರಾ.ಮತ್ತು ಪಂ.ರಾಜ್ ವಿ.ವಿ.ದ ಕುಲಸಚಿವರು ಹಾಗೂ ಕುಲಪತಿ (ಪ್ರ) ಪ್ರೊ.ಡಾ.ಸುರೇಶ ನಾಡಗೌಡರ, ಕ.ಪಂ.ರಾ.ಪ ಕಾರ್ಯಾಧ್ಯಕ್ಷ ವಿ.ವೈ. ಘೋರ್ಪಡೆ, ಕ.ಪಂ.ರಾ.ಪ.ಉಪಾಧ್ಯಕ್ಷರಾದ ವಿ.ಎಸ್.ಪಾಟೀಲ, ಶ್ರೀಮತಿ ಸೌಭಾಗ್ಯ ಬಸವರಾಜನ್, ಮ.ಗಾಂ.ಗ್ರಾ. ಮತ್ತು ಪಂಚಾಯತ್ ರಾಜ್ ವಿ.ವಿ. ಹಣಕಾಸು ಅಧಿಕಾರಿ ಪ್ರಶಾಂತ್ ಜೆ.ಸಿ, ಕೆ.ಪಿ.ಆರ್.ಪಿ. ಪ್ರಧಾನ ಕಾರ್ಯದರ್ಶಿ ಸತೀಶ್ ಕೆ.ಎಸ್. ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande