ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗದಗ ಜಿಲ್ಲಾ ಪ್ರವಾಸ
ಗದಗ, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 13 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು ಕಾರ್ಯಕ್ರಮದ ವಿವರ ಈ ಕೆಳಗಿನಂತಿದೆ. ಡಿಸೆಂಬರ್ 13 ರಂದು ಬೆಳಿಗ್ಗೆ 10.20 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್‌ದಿ
ಫೋಟೋ


ಗದಗ, 11 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 13 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು ಕಾರ್ಯಕ್ರಮದ ವಿವರ ಈ ಕೆಳಗಿನಂತಿದೆ.

ಡಿಸೆಂಬರ್ 13 ರಂದು ಬೆಳಿಗ್ಗೆ 10.20 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್‌ದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11.15 ಗಂಟೆಗೆ ಜಿಲ್ಲೆಯ ಲಕ್ಷ್ಮೇಶ್ವರ ಶ್ರೀ ಉಮಾ ಪಿ.ಯು.ಕಾಲೇಜ್ ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸುವರು. ಲಕ್ಷ್ಮೇಶ್ವರ ಚಂದನ ಎಜ್ಯುಕೇಶನ್ ಸೊಸೈಟಿ ವತಿಯಿಂದ ಆಯೋಜಿಸಿರುವ ಭಾರತರತ್ನ ಪ್ರೊ.ಸಿ.ಎನ್.ಆರ್.ರಾವ್ 10 ನೇ ವರ್ಷದ ವಿಜ್ಞಾನ ವಿಸ್ತçತ ಕಾರ್ಯಕ್ರಮ-2025 ಹಾಗೂ ಬಿ.ಎಸ್.ಪಾಟೀಲ, ಭಾ.ಆ.ಸೇ (ನಿ) ಇವರಿಗೆ 2025 ನೇ ಸಾಲಿನ ಪ್ರತಿಷ್ಟಿತ ಚಂದನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಜರುಗಿಸುವರು.

ಮಧ್ಯಾಹ್ನ 3 ಗಂಟೆಗೆ ಲಕ್ಷ್ಮೇಶ್ವರ ಶ್ರೀ ಉಮಾ ಪಿ.ಯು.ಕಾಲೇಜ್ ಮೈದಾನ ಹೆಲಿಪ್ಯಾಡ್‌ದಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande