ಜನನ, ಮರಣ ನೊಂದಾಣಿ ವಿಳಂಬವಾಗದಂತೆ ನಿಗಾ ವಹಿಸಿ : ಜಿಲ್ಲಾಧಿಕಾರಿ
ಹೊಸಪೇಟೆ, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಬೆಳೆ ಕಟಾವು ಪ್ರಯೋಗಗಳು ಮತ್ತು ಜನನ, ಮರಣಗಳ ನೋಂದಾಣಿಗಳನ್ನು ವಿಳಂಬವಾಗದಂತೆ ನಿಗಾ ವಹಿಸಬೇಕು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜ
ಜನನ, ಮರಣ ನೊಂದಾಣಿ ವಿಳಂಬವಾಗದಂತೆ ನಿಗಾ ವಹಿಸಿ : ಜಿಲ್ಲಾಧಿಕಾರಿ


ಹೊಸಪೇಟೆ, 11 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಬೆಳೆ ಕಟಾವು ಪ್ರಯೋಗಗಳು ಮತ್ತು ಜನನ, ಮರಣಗಳ ನೋಂದಾಣಿಗಳನ್ನು ವಿಳಂಬವಾಗದಂತೆ ನಿಗಾ ವಹಿಸಬೇಕು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಗುರುವಾರ ಮಾತನಾಡಿದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 3446 ಬೆಳೆ ಕಟಾವು ಪ್ರಯೋಗಗಳು ಮತ್ತು ಹಿಂಗಾರು ಹಂಗಾಮಿನಲ್ಲಿ 906 ಬೆಳೆ ಕಟಾವು ಪ್ರಯೋಗಗಳನ್ನು ಹಂಚಿಕೆ ಮಾಡಲಾಯಿತ್ತು. ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಶೇ.86 ರಷ್ಟು ನಮೂನೆ-2 ಗಳನ್ನು ಸಲ್ಲಿಸಲಾಗಿದೆ. ಬಾಕಿ ಉಳಿದ ನಮೂನೆಗಳನ್ನು ತಕ್ಷಣ ನೊಂದಾಣಿ ಮಾಡಲು ಸೂಚಿಸಿದರು. ಹಿಂಗಾರು ಹಂಗಾಮಿನ ನಮೂನೆ-1 ಗಳನ್ನು ಡೌನ್‍ಲೋಡ್ ಮಾಡಿಕೊಂಡು ಬೆಳೆ ಸಮೀಕ್ಷೆ ಕೈಗೊಳ್ಳುವುದು. ಬೆಳೆ ಕಟಾವು ಪ್ರಯೋಗಗಳ ವ್ಯಪಘಾತವಾಗದಂತೆ ಜಾಗೃತ ವಹಿಸುವುದು.

ಜನನ ಮರಣ ನಾಗರಿಕ ನೋಂದಾಣಿ ಪದ್ದತಿ : ಜಿಲ್ಲೆಯಲ್ಲಿ ಜನನ ಮತ್ತು ಮರಣ ನೊಂದಾಣಿಗಳು ಕಳೆದ 4 ತಿಂಗಳಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಜನನ 7870, ಮರಣ 3653 ಒಟ್ಟು 11523 ನೊಂದಾಣಿಯಾಗುತ್ತಿರುವ ಎಂದು ವರದಿಯಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿನ ಜನನ-ಮರಣ ನೊಂದಾಣಿ ಪ್ರಕ್ರಿಯೆ ವಿಳಂಬವಾಗದಂತೆ ನಿಗದಿತ ಸಮಯದಲ್ಲಿ ನೊಂದಾಣಿ ಮಾಡಲು ಜನನ-ಮರಣ ಎಲ್ಲಾ ನೊಂದಾಣಿಧಿಕಾರಿ ಮತ್ತು ಉಪನೊಂದಾಣಿಧಿಕಾರಿಗಳಿಗೆ ಕ್ರಮವಹಿಸಲು ಸೂಚಿಸಿದರು.

ಹೊಸಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜನನ ನೊಂದಾಣಿಯನ್ನು ನಿಗದಿತ ಸಮಯದಲ್ಲಿ ನೊಂದಾಣಿಯಾಗುತ್ತಿಲ್ಲ ಎಂದು ಪರಿಶಿಲನೆಯಿಂದ ತಿಳಿದು ಬಂದಿದ್ದು ಎಲ್ಲಾ ನೊಂದಾಣಿಗಳನ್ನು ನಿಗಧಿತ ಸಮಯದಲ್ಲಿ ನೊಂದಾಣಿ ಮಾಡಲು ಸಂಬಂಧಿಸಿದ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಸರ್ಕಾರದ ಮಾರ್ಗಸೂಚಿಯಂತೆ 21 ದಿನಗಳ ಬದಲಾಗಿ 21 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಪ್ರಮಾಣ ಪತ್ರಗಳನ್ನು ಕುಟುಂಬಸ್ಥರಿಗೆ ನೀಡುವಲ್ಲಿ ಯಶ್ವಸಿಯಾಗಬೇಕು.

ಬೆಳೆ ಕ್ಷೇತ್ರ ಮರು ಹೊಂದಾಣಿಕೆ, ಕೃಷಿ ಅಂಕಿ ಅಂಶಗಳು : ಜಿಲ್ಲೆಯಲ್ಲಿ 2025-26 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಲ್ಲಿ ಮುಂಗಾರು ಸಾಲಿನಲ್ಲಿ ಒಟ್ಟು 103495 ರೈತರು ನೊಂದಾಯಿಸಿದ್ದಾರೆ. 89561.9 ಹೆಕ್ಟರ್ ವಿಸ್ತೀರ್ಣ ಕೃಷಿ ಭೂಮಿಗೆ ವಿಮಾ ನೊಂದಾಯಿಸಲಾಗಿದೆ. ಒಟ್ಟು 52021.89 ಲಕ್ಷ ರೂಗಳ ವಿಮಾ ಮೊತ್ತ 1066.31 ಲಕ್ಷ ರೂಗಳ ವಿಮಾ ಕಂತು ಪಾವತಿಸಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಣಿ ಮಾಡಲು ಅಧಿಕಾರಿಗಳು ಆಸಕ್ತಿ ಗುರಿಯನ್ನು ಹೊಂದಿಕೊಂಡು ವೃತ್ತಿ ಮಾಡಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ μÁ ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಜನನ ಮತ್ತು ಪ್ರಮಾಣ ಪತ್ರಗಳನ್ನು ಆಯಾ ಗ್ರಾಪಂಗಳಲ್ಲಿ ನೀಡಲಾಗುವುದು. ಆಯಾ ಗ್ರಾಪಂ ಪಿಡಿಒಗಳು ನಿಗಾ ವಹಿಸಿ ಪ್ರಮಾಣ ಪತ್ರ ವಿತರಣೆಯಲ್ಲಿ ಯಾವುದೇ ವಿಳಂಬ ಮಾಡದಂತೆ ನಿಗಾ ವಹಿಸಬೇಕು. ಬೆಳೆ ವಿಮೆ ಸ್ಥಳೀಯವಾಗಿ ನಡೆಸಿದ ಬೆಳೆ ಕಟಾವು ಪ್ರಯೋಗದ ವರದಿ ಮಾಡುವಾಗ ಅಧಿಕಾರಿಗಳು ಸಮಯಕ್ಕೆ ಬೆಳೆ ಕಟಾವು ಪ್ರಯೋಗ ಮಾಡಬೇಕು.

ತಂತ್ರಾಂಶದಲ್ಲಿ ಅಂಕಿ ಅಂಶಗಳು ತಪ್ಪಾಗದಂತೆ ಪ್ರಯೋಗದ ವಿವರಗಳನ್ನು ಭರ್ತಿ ಮಾಡಬೇಕು. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ನೊಂದಾಣಿಗಳನ್ನು ಶೇ.51 ರಷ್ಟು ಮಾಡಲಾಗಿದೆ. ಹಾಗಾಗೀ ಲೀಡ್ ಬ್ಯಾಂಕ್‍ಗಳ ಮ್ಯಾನೇಜರ್ ಮತ್ತು ಕೃಷಿ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೈತರಿಗೆ ಶೇ.100 ರಷ್ಟು ನೊಂದಾಣಿ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ವೇಳೆ ಸಭೆಯಲ್ಲಿ ಜಿಲ್ಲಾ ಸಾಂಖ್ಯಿಕ ಅಧಿಕಾರಿ ಎನ್.ಕೆ.ಪತ್ರಿಬಸಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿ.ಟಿ.ಮಂಜುನಾಥ, ಉಪನಿರ್ದೇಶಕ ನಯೀಮ್ ಪಾμÁ, ತೋಟಗಾರಿಕಾ ಉಪನಿರ್ದೇಶಕ ಪ್ರಭುರಾಜ್, ರೇμÉ್ಮೀ ಉಪನಿರ್ದೇಶಕ ಶ್ರೀ ಹರ್ಷ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ತಾಲೂಕು ವೈದ್ಯಾಧಿಕಾರಿ ಡಾ.ಹರಿಪ್ರಸಾದ, ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande