ಮಕ್ಕಳಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ : ಡಿಸಿ
ಗದಗ, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, 5 ವರ್ಷದೊಳಗಿನ ಪ್ರತಿ ಮಗುವಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇ
ಫೋಟೋ


ಗದಗ, 11 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, 5 ವರ್ಷದೊಳಗಿನ ಪ್ರತಿ ಮಗುವಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್ ಎಸ್ ನೀಲಗುಂದ ಮಾತನಾಡಿ ಡಿಸೆಂಬರ್ 21 ಕ್ಕೆ 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಲು ಕ್ರಮ ವಹಿಸಲಾಗಿದೆ ಎಂದರು, ಪಲ್ಸ್ ಪೋಲಿಯೋ ಲಸಿಕೆ ನೀಡಲು ಅಗತ್ಯವಿರುವ ಸಿಬ್ಬಂದಿಗಳಿಗೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಹಾಗೂ ರೂಟ್ ಮ್ಯಾಪ್ ಗಳನ್ನು ಮಾಡಿಕೊಳ್ಳಲಾಗಿದೆ. ವಲಸೆ ಹೋಗಿರುವ ಮತ್ತು ವಲಸೆ ಬಂದಿರುವ ಕುಟುಂಬದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ. ಜಿಲ್ಲೆಯಲ್ಲಿ 0-5 ವರ್ಷದೊಳಗಿನ 1,15,653 ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಸಭೆಗೆ ತಿಳಿಸಿದರು.

(ಡಬ್ಲೂಎಚ್‌ಒ) ಬಿಜಾಪುರ ಯುನಿಟ್‌ನ, ಎಸ್‌ಎಮ್‌ಒ ಡಾ. ಮುಕುಂದ ಗಲಗಲಿ ಇವರು ಮಾತನಾಡಿ ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಬೂತ್ ಮಟ್ಟದಲ್ಲಿ ಲಸಿಕೆ ನೀಡಲಾಗುತ್ತದೆ. ಡಿಸೆಂಬರ್ 22 ರಿಂದ ಡಿಸೆಂಬರ್ 24 ರವರೆಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್ 21 ರಿಂದ 24 ರವರೆಗೆ 4 ದಿನಗಳು ಸಂಚಾರ ಕೇಂದ್ರಗಳು ಹಾಗೂ ಹೆಚ್ಚಿನ ಅಪಾಯ ಪ್ರದೇಶಗಳಲ್ಲಿ ವಿಶೇಷ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಭೆಗೆ ತಿಳಿಸಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ..ಮಿನಾಕ್ಷಿ ಕೆ ಎಸ್ ಮಾತನಾಡಿ 0 ದಿಂದ 5 ವರ್ಷದೊಳಗಿನ ಮಕ್ಕಳಿಗೆ ಶೇಕಡ 100 ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು

ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಕರಿಗೌಡರ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ರಾಜೇಂದ್ರ ಬಸರಿಗಿಡದ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಥೋಡ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜರಾಮ ಪವಾರ, ತಾಲೂಕಾ ವೈದ್ಯಾಧಿಕಾರಿಗಳು, ಸಿಪಿಐ, ಪಲ್ಸ ಪೋಲಿಯೋ ಜಿಲ್ಲಾ ಟಾಸ್ಕ ಫೋರ್ಸ್ ಸಮಿತಿಯ ಸದಸ್ಯರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande